Select Your Language

Notifications

webdunia
webdunia
webdunia
webdunia

ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್ ಗೆಲುವಿಗೆ ತಡೆಯೇ ಇಲ್ಲ

ಡಬ್ಲ್ಯುಪಿಎಲ್: ಮುಂಬೈ ಇಂಡಿಯನ್ಸ್ ಗೆಲುವಿಗೆ ತಡೆಯೇ ಇಲ್ಲ
ಮುಂಬೈ , ಸೋಮವಾರ, 13 ಮಾರ್ಚ್ 2023 (08:30 IST)
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಅಜೇಯವಾಗಿ ಮುಂದುವರಿದಿದೆ.

ನಿನ್ನೆಯ ಯುಪಿ ವಾರಿಯರ್ಸ್  ವಿರುದ್ಧದ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡ ಮುಂಬೈ ಸತತ ನಾಲ್ಕನೇ ಗೆಲುವು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಯುಪಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 17.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 164 ರನ್ ಗಳಿಸುವ ಮೂಲಕ ಗೆಲುವಿನ ಗುರಿ ತಲುಪಿತು. ನಾಯಕಿಯ ಆಟವಾಡಿದ ಹರ್ಮನ್ ಪ್ರೀತ್ ಕೌರ್ 33 ಎಸೆತಗಳಿಂದ ಅಜೇಯ 53 ರನ್ ಸಿಡಿಸಿ ಪಂದ್ಯಶ್ರೇಷ್ಠರಾದರು. ಇದರೊಂದಿಗೆ ಮುಂಬೈ ತನ್ನ ಅಜೇಯ ದಾಖಲೆಯನ್ನು ಮುಂದುವರಿಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ಕೊಹ್ಲಿ ದ್ವಿಶತಕದ ಕನಸು ಕೊನೆಗೂ ನೆರವೇರಲೇ ಇಲ್ಲ