WPL: ಮಹಿಳೆಯರ ಐಪಿಎಲ್ ವೇಳಾಪಟ್ಟಿ ಪ್ರಕಟ: ಬೆಂಗಳೂರಿಗರಿಗೆ ಗುಡ್ ನ್ಯೂಸ್!

Krishnaveni K
ಮಂಗಳವಾರ, 23 ಜನವರಿ 2024 (12:20 IST)
ಮುಂಬೈ: ಮಹಿಳೆಯರ ಐಪಿಎಲ್ ಎಂದೇ ಜನಪ್ರಿಯವಾಗಿರುವ ಡಬ್ಲ್ಯುಪಿಎಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.

ನಿರೀಕ್ಷೆಯಂತೇ ಫೆಬ್ರವರಿಯಲ್ಲೇ ಟೂರ್ನಿ ನಡೆಯಲಿದೆ. ಫೆಬ್ರವರಿ 23 ರಿಂದ ಮಾರ್ಚ್ 17 ರ ತನಕ ನಡೆಯಲಿದೆ. ವಿಶೇಷವೆಂದರೆ ಈ ಬಾರಿ ವಿವಿಧ ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಇದು ಡಬ್ಲ್ಯುಪಿಎಲ್ ಎರಡನೇ ಆವೃತ್ತಿಯಾಗಿದೆ. ಮೊದಲ ಆವೃತ್ತಿ ಕೇವಲ ಮುಂಬೈನಲ್ಲಿ ಮಾತ್ರ ನಡೆದಿತ್ತು. ಈ ವೇಳೆ ದೇಶದ ವಿವಿಧ ತಾಣಗಳಲ್ಲಿ ಪಂದ್ಯಾವಳಿ ಆಯೋಜಿಸಲು  ಬೇಡಿಕೆ ಬಂದಿತ್ತು.

ಅದರಂತೆ ಈ ಬಾರಿ ಬೆಂಗಳೂರು ಮತ್ತು ದೆಹಲಿಯಲ್ಲಿ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯ ಸೇರಿದಂತೆ ಆರಂಭಿಕ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಿರುವುದು ವಿಶೇಷ. ಫೈನಲ್ ಮತ್ತು ಅಂತಿಮ ಹಂತದ ಪಂದ್ಯಗಳು ದೆಹಲಿಯಲ್ಲಿ ನಡೆಯಲಿದೆ.

ಕಳೆದ ಬಾರಿ ಮುಂಬೈ ಇಂಡಿಯನ್ಸ್ ಪ್ರಶಸ್ತಿ ಗೆದ್ದುಕೊಂಡಿತ್ತು. ಟೂರ್ನಿಯಲ್ಲಿ ಒಟ್ಟು 5 ತಂಡಗಳಿವೆ. ಕಳೆದ ಬಾರಿ ಆರ್ ಸಿಬಿ ತೀರಾ ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಆದರೆ ಈ ಬಾರಿ ತವರಿನಲ್ಲೂ ಪಂದ್ಯಗಳು ನಡೆಯುತ್ತಿರುವುದರಿಂದ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments