ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

Sampriya
ಬುಧವಾರ, 19 ನವೆಂಬರ್ 2025 (11:40 IST)
Photo Credit X
ಮುಂಬೈ: ಮಹಿಳೆಯರ ಏಕದಿನ ವಿಶ್ವಕಪ್‌ ಗೆದ್ದ ಉತ್ಸಾಹದಲ್ಲಿರುವ ಭಾರತ ತಂಡದ ವನಿತೆಯರು ಮಹಿಳಾ ಪ್ರೀಮಿಯರ್‌ ಲೀಗ್‌ಗೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವಧಿಗಿಂತ ಬೇಗ ಟೂರ್ನಿ ಆಯೋಜನೆಗೊಳ್ಳುವ ಸಾಧ್ಯತೆಯಿದೆ. 

ಕಳೆದ ವರ್ಷ ಟೂರ್ನಿಯನ್ನು ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ಮಾಡಲಾಗಿತ್ತು. ಆದರೆ ಈ ಬಾರಿ ಫೆಬ್ರವರಿ ದ್ವಿತೀಯ ವಾರದಲ್ಲಿ ಪುರುಷರ ಟಿ20 ವಿಶ್ವಕಪ್‌ ಟೂರ್ನಿ ಆರಂಭಗೊಳ್ಳಲಿದೆ. ಪಂದ್ಯಾವಳಿ ಭಾರತಲ್ಲಿ ನಡೆಯಲಿದೆ. ಹೀಗಾಗಿ ಜನವರಿಯಲ್ಲೇ ಮಹಿಳಾ ಪ್ರೀಮಿಯರ್‌ ಲೀಗ್‌ ಆರಂಭಿಸಲು ನಿರ್ಧರಿಸಲಾಗಿದೆ.

ನಾಲ್ಕನೇ ಆವೃತ್ತಿಯ ಮಹಿಳಾ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿ ಜನವರಿ 7ರಿಂದ ಫೆಬ್ರವರಿ 3 ರವರೆಗೆ ಮುಂಬೈ ಮತ್ತು ಬರೋಡಾದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆಟಗಾರ್ತಿಯ ಹರಾಜು ನವೆಂಬರ್ 27 ರಂದು ದೆಹಲಿಯಲ್ಲಿ ನಡೆಯಲಿದೆ. ಉದ್ಘಾಟನ ಪಂದ್ಯ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ.

ಪಂದ್ಯಗಳ ಸ್ಥಳಗಳ ಕುರಿತು ಅನೌಪಚಾರಿಕ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ನವೆಂಬರ್ 27 ರಂದು ನವದೆಹಲಿಯಲ್ಲಿ ನಡೆಯಲಿರುವ ಆಟಗಾರ್ತಿಯರ ಹರಾಜಿಗೆ ಮುಂಚೆ ಐದು ತಂಡಗಳಿಗೆ ಸ್ಥಳಗಳ ಕುರಿತು ಅಂತಿಮಗೊಳಿಸುವ ನಿರೀಕ್ಷೆಯಿದೆ. 

ಮುಂಬೈ ಮತ್ತು ಬರೋಡಾ ಜತೆ ಬೆಂಗಳೂರು ಹಾಗೂ ಲಖನೌ ಕೂಡ ಟೂರ್ನಿ ಆಯೋಜಿಸಲು ಪೈಪೋಟಿಯಲ್ಲಿದ್ದವು. ಬೆಂಗಳೂರಿನಲ್ಲಿ ಪಂದ್ಯಗಳು ನಡೆಯುವುದು ಅನುಮಾನವಾಗಿದೆ. ಹೀಗಾಗಿ, ಆರ್‌ಸಿಬಿ ಅಭಿಮಾನಿಗಳಿಗೆ ನಿರಾಸೆಯಾಗಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments