ಮುಂಬೈ: ಡಬ್ಲ್ಯುಪಿಎಲ್ ಟೂರ್ನಮೆಂಟ್ ನಲ್ಲಿ ಸತತ ಎರಡು ಸೋಲುಗಳನ್ನು ಕಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಮೂರನೇ ಪಂದ್ಯವನ್ನು ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದೆ.
ಇದು ಒಂದು ರೀತಿಯಲ್ಲಿ ಸಮಾನ ದುಃಖಿಗಳ ಪಂದ್ಯ ಎಂದೇ ಹೇಳಬಹುದು. ಯಾಕೆಂದರೆ ಗುಜರಾತ್ ಕೂಡಾ ಇದುವರೆಗೆ ಆಡಿದ ಎರಡು ಪಂದ್ಯಗಳನ್ನು ಸೋತು ಮೊದಲ ಗೆಲುವಿನ ಹುಡುಕಾಟದಲ್ಲಿದೆ.
ಆರ್ ಸಿಬಿಯಲ್ಲಿ ಎಲ್ಲಾ ವಿಭಾಗದಲ್ಲೂ ಘಟಾನುಘಟಿ ಆಟಗಾರರೇ ಇದ್ದರೂ ಒಂದು ತಂಡವಾಗಿ ಆಡುವಲ್ಲಿ ವಿಫಲವಾಗಿದೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಸಂಘಟಿತ ಹೋರಾಟದ ಕೊರತೆ ಎದ್ದು ಕಾಣುತ್ತಿದೆ. ಈ ಪಂದ್ಯದಲ್ಲಾದರೂ ಗೆದ್ದು ಟೂರ್ನಿಯಲ್ಲಿ ಜೀವಂತವಾಗಿರಬಹುದು ಎಂಬ ನಿರೀಕ್ಷೆ ಅಭಿಮಾನಿಗಳದ್ದು.