ಮುಂಬೈ: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಆಯ್ಕೆಯಾಗಿದ್ದ ಕೆಎಲ್ ರಾಹುಲ್ ಐಪಿಎಲ್ ಟೂರ್ನಿ ವೇಳೆ ಗಾಯಗೊಂಡಿದ್ದರಿಂದ ಅವರ ಸ್ಥಾನಕ್ಕೆ ಇಶಾನ್ ಕಿಶನ್ ಗೆ ಅವಕಾಶ ನೀಡಲಾಗಿದೆ.
ಜೂನ್ 7 ರಂದು ಇಂಗ್ಲೆಂಡ್ ನ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಡಬ್ಲ್ಯುಟಿಸಿ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದರು.
ಆದರೆ ಐಪಿಎಲ್ ನಲ್ಲಿ ಲಕ್ನೋ ತಂಡದ ನಾಯಕರಾಗಿರುವ ರಾಹುಲ್ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿದ್ದರು. ಹೀಗಾಗಿ ಅವರು ಶಸ್ತ್ರಚಿಕಿತ್ಸೆಗೊಳಗಾಗಬೇಕಿದೆ. ಹೀಗಾಗಿ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.