ಬೆಂಗಳೂರು: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ವಿಶಿಷ್ಟ ದಾಖಲೆ ಮಾಡಿದ್ದಾರೆ.
ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಗಳಿಸಿದ್ದು ಕೇವಲ 4 ರನ್. ಹಾಗಿದ್ದರೂ ಅವರು ವಿಶಿಷ್ಟ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.
ಯಶಸ್ವಿ ಜೈಸ್ವಾಲ್ ಈ ಪಂದ್ಯದ ಮೂಲಕ ಟಿ20 ಕ್ರಿಕೆಟ್ ನಲ್ಲಿ 500 ರನ್ ಗಳಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ನಲ್ಲಿ ಅತೀ ಕಿರಿಯ ವಯಸ್ಸಿನಲ್ಲಿ 500 ರನ್ ಗಳಿಸಿದ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಯಶಸ್ವಿ 22 ವರ್ಷ 20 ದಿನಗಳಲ್ಲಿ ಈ ದಾಖಲೆ ಮಾಡಿದ್ದಾರೆ.
ಇದಕ್ಕೆ ಮೊದಲು ರಿಷಬ್ ಪಂತ್ 23 ವರ್ಷ 165 ದಿನಗಳಲ್ಲಿ 500 ರನ್ ಗಳಿಸಿದ್ದು ದಾಖಲೆಯಾಗಿತ್ತು. ಆ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮುರಿದಿದ್ದಾರೆ. ಈ ಪಟ್ಟಿಯಲ್ಲಿ ಇಶಾನ್ ಕಿಶನ್ ಮೂರನೇ ಮತ್ತು ಸುರೇಶ್ ರೈನಾ ನಾಲ್ಕನೇ ಸ್ಥಾನದಲ್ಲಿದ್ದಾರೆ.