ಅಹಮ್ಮದಾಬಾದ್: ನಾಳೆ ಭಾರತ ಮತ್ತು ಪಾಕಿಸ್ತಾನ ನಡುವೆ ಮಹತ್ವದ ಪಂದ್ಯವಿದೆ. ಆದರೆ ಈ ಪಂದ್ಯಕ್ಕೆ ಟೀಂ ಇಂಡಿಯಾ ಆರಂಭಿಕ ಶುಬ್ಮನ್ ಗಿಲ್ ಲಭ್ಯರಿರುತ್ತಾರಾ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಿಲ್ ಈಗಷ್ಟೇ ಚೇತರಿಸಿಕೊಂಡಿದ್ದಾರೆ. ನಿನ್ನೆ ಅಹಮ್ಮದಾಬಾದ್ ನಲ್ಲಿ ತಂಡದ ಜೊತೆ ನೆಟ್ ಪ್ರಾಕ್ಟೀಸ್ ಮಾಡಿದ್ದಾರೆ. ಹೀಗಾಗಿ ಅವರು ಆಡಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು.
ಈ ನಡುವೆ ಗಿಲ್ ಗೆ ಆಪ್ತರಾಗಿರುವ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸ್ಪೂರ್ತಿ ತುಂಬುವ ಕೆಲಸ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ನಾನು ಡೆಂಗ್ಯೂ ಇದ್ದಾಗ ನಾಲ್ಕು ಬಾರಿ ಆಡಿದ್ದೆ. ಡೆಂಗ್ಯೂ ಇದೆ ಎಂದು ಹಿಂಜರಿಯಬೇಡ. ಎದ್ದು ಆಡಲು ಹೋಗು ಎಂದು ಗಿಲ್ ಗೆ ಹೇಳಿದ್ದೇನೆ ಎಂದು ಯುವಿ ಹೇಳಿಕೊಂಡಿದ್ದಾರೆ. ಹೀಗಾಗಿ ಗಿಲ್ ಇದನ್ನು ಸವಾಲಾಗಿ ತೆಗೆದುಕೊಂಡು ಕಣಕ್ಕಿಳಿಯುತ್ತಾರಾ ಕಾದು ನೋಡಬೇಕು.