Publish Date: Tue, 24 Apr 2018 (08:29 IST)
Updated Date: Tue, 24 Apr 2018 (08:30 IST)
ಮೊಹಾಲಿ: ಸದ್ಯಕ್ಕೆ ಐಪಿಎಲ್ ನಲ್ಲೂ ನಿರೀಕ್ಷತ ಪ್ರದರ್ಶನ ನೀಡಲು ವಿಫಲರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ಯಾವಾಗ ಎಂದು ಹೇಳಿಕೊಂಡಿದ್ದಾರೆ.
‘2019 ರ ವಿಶ್ವಕಪ್ ವರೆಗೆ ನನ್ನ ವೃತ್ತಿ ಜೀವನವನ್ನು ಮುಂದುವರಿಸಲು ಬಯಸುತ್ತೇನೆ. ಅದಾದ ಬಳಿಕ ನಿವೃತ್ತಿಯಾಗುತ್ತೇನೆ’ ಎಂದು ಯುವಿ ಹೇಳಿಕೊಂಡಿದ್ದಾರೆ.
2011 ರ ವಿಶ್ವಕಪ್ ಹೀರೋ ಯುವರಾಜ್ ಇದೀಗ ನಡೆಯುತ್ತಿರುವ ಐಪಿಎಲ್ ಕೂಟದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ. ಆದರೆ ಅಲ್ಲಿಯೂ ನಿರೀಕ್ಷಿತ ಫಾರ್ಮ್ ಕಂಡುಕೊಳ್ಳಲು ಸಾಧ್ಯವಾಗದೇ ಅಭಿಮಾನಿಗಳಿಂದ ಟ್ರೋಲ್ ಗೆ ಒಳಗಾಗುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.