Webdunia - Bharat's app for daily news and videos

Install App

ಆಂಗ್ಲ ಬೌಲರ್‌ಗಳನ್ನು ಬೆಂಡೆತ್ತಿದ ಜದ್ರಾನ್‌: ವಿಶ್ವದಾಖಲೆಯ ಶತಕ ಸಿಡಿಸಿದ ಅಫ್ಗನ್‌ ಬ್ಯಾಟರ್‌

Sampriya
ಬುಧವಾರ, 26 ಫೆಬ್ರವರಿ 2025 (19:10 IST)
Photo Courtesy X
ಲಾಹೋರ್‌: ಅಫ್ಗಾನಿಸ್ತಾನ ತಂಡದ ಆರಂಭಿಕ ಬ್ಯಾಟರ್‌ ಇಬ್ರಾಹಿಂ ಜದ್ರಾನ್‌ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯದಲ್ಲಿ ವಿಶ್ವದಾಖಲೆಯ ಶತಕವನ್ನು ಸಿಡಿಸಿ ಅಬ್ಬರಿಸಿದ್ದಾರೆ.

ಬಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಇಂಗ್ಲೆಂಡ್ ಮತ್ತು ಅಫ್ಗನ್‌ ತಂಡಗಳ ನಡುವೆ ಕಾಳಗ ನಡೆಯುತ್ತಿದೆ. ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಟಾಸ್‌ ಗೆದ್ದ ಅಫ್ಗನ್‌ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬ್ಯಾಟಿಂಗ್‌ ಆಯ್ದುಕೊಂಡರು. ನಾಯಕ ಈ ಆಯ್ಕೆಯನ್ನು ಸಮರ್ಥಿಸುವಂತೆ ಜದ್ರಾನ್‌ ಬ್ಯಾಟಿಂಗ್‌ ನಡೆಸಿ, ಹೊಸ ಸಂಚಲನವನ್ನು ಸೃಷ್ಟಿ ಮಾಡಿದರು.

ಇಬ್ರಾಹಿಂ ಜದ್ರಾನ್ 146 ಎಸೆತಗಳಲ್ಲಿ 12 ಬೌಂಡರಿ, 6 ಸಿಕ್ಸರ್​ಗಳ ನೆರವಿನಿಂದ  177 ರನ್​​ ಗಳಿಸಿದರು. ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ಪರ ಅತಿ ಹೆಚ್ಚು ರನ್​ ಸಿಡಿಸಿದ ಬ್ಯಾಟರ್​​ ಎಂಬ ದಾಖಲೆಗೆ ಕಾರಣರಾದರು. ಅಲ್ಲದೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಇದಾಗಿದೆ.

​ಇಬ್ರಾಹಿಂ ಜದ್ರಾನ್ ವಿಶ್ವದಾಖಲೆಯ ಶತಕದ ನೆರವಿನಿಂದ ಅಫ್ಘಾನಿಸ್ತಾನ ತಂಡ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 326 ರನ್ ಗಳಿಸಿ ಎದುರಾಳಿ ತಂಡಕ್ಕೆ ಕಠಿಣ ಗುರಿ ನೀಡಿದೆ.  ಇದು ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ 6ನೇ ಗರಿಷ್ಠ ಮೊತ್ತವೂ ಆಗಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments