Webdunia - Bharat's app for daily news and videos

Install App

ಆಂಗ್ಲರಿಗೆ ಸೆಡ್ಡು ಹೊಡೆದು ನಿಂತ ಭಾರತೀಯ ದಾಂಡಿಗರು

Webdunia
ಶನಿವಾರ, 30 ಜುಲೈ 2011 (17:47 IST)
ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನ 221 ರನ್ನುಗಳಿಗೆ ಉತ್ತರವಾಗಿ ದ್ವಿತೀಯ ದಿನದಾಟ ಮುಂದುವರಿಸಿರುವ ಟೀಮ್ ಇಂಡಿಯಾ ಊಟದ ವಿರಾಮದ ವೇಳೆಗೆ 43 ಓವರುಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿದ್ದು, 104 ರನ್ನುಗಳ ಹಿನ್ನಡೆ ಅನುಭವಿಸುತ್ತಿದೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

PTI


24 /1 ಎಂಬಲ್ಲಿದ್ದ ಬ್ಯಾಟಿಂಗ್ ಮುಂದುವರಿಸಿದ್ದ ಭಾರತಕ್ಕೆ ಕಲಾತ್ಮಕ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ಮತ್ತು 'ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಚೇತರಿಕೆಯ ಆರಂಭವೊದಗಿಸಿದರು.

ಇಂಗ್ಲೆಂಡ್ ವೇಗಿಗಳನ್ನು ಸಮರ್ಥವಾಗಿ ಎದುರಿಸಿದ ದ್ರಾವಿಡ್-ಲಕ್ಷ್ಮಣ್ ಜೋಡಿ ದ್ವಿತೀಯ ವಿಕೆಟ್‌ಗೆ 93 ರನ್ನುಗಳ ಮಹತ್ವದ ಜತೆಯಾಟ ನೀಡಿದರು. ಈ ಸಂದರ್ಭದಲ್ಲಿ ಅರ್ಧಶತಕ ಬಾರಿಸಿದ್ದ ಲಕ್ಷ್ಮಣ್ ವಿಕೆಟ್ ನಷ್ಟವಾಯಿತು. 112 ಎಸೆತಗಳನ್ನು ಎದುರಿಸಿದ ಲಕ್ಷ್ಮಣ್ ಆರು ಬೌಂಡರಿಗಳ ನೆರವಿನಿಂದ 54 ರನ್ ಗಳಿಸಿದರು. ಆ ಮೂಲಕ ದೊಡ್ಡ ಮೊತ್ತವಾಗಿ ಪರಿವರ್ತಿಸುವಲ್ಲಿ ವಿಫಲರಾದರು.

ನಂತರ ಕ್ರೀಸಿಗಿಳಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (14*) ಜತೆ ದ್ರಾವಿಡ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. 118 ಎಸೆತಗಳಲ್ಲಿ 44 ರನ್ ಗಳಿಸಿರುವ ದ್ರಾವಿಡ್ ಉತ್ತಮ ಲಯ ಕಂಡುಕೊಂಡಿದ್ದಾರೆ. ಮೊದಲ ಅವಧಿಯ 28 ಓವರುಗಳಲ್ಲಿ ಒಂದು ವಿಕೆಟ್ ಕಳೆದುಕೊಂಡಿರುವ ಭಾರತ 98 ರನ್ ಪೇರಿಸಿದೆ.

ಟ್ರೆಂಟ್ ಬ್ರಿಡ್ಜ್‌ನಲ್ಲಿ ಅಮೋಘ ಸರಾಸರಿ ಹೊಂದಿರುವ ಸಚಿನ್ ಇದೇ ಪಂದ್ಯದಲ್ಲೇ ಶತಕಗಳ ಶತಕದ ಸಾಧನೆ ಮಾಡಲಿದ್ದಾರೆಯೇ ಎಂಬುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಆ ಮೂಲಕ ಲಾರ್ಡ್ಸ್‌ನಲ್ಲಿ ಎದುರಾದ ಹೀನಾಯ ಸೋಲಿಗೆ ತಿರುಗೇಟು ನೀಡಲು ಟೀಮ್ ಇಂಡಿಯಾ ಸಜ್ಜಾಗಿದೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

ವೆಬ್ದುನಿಯಾವನ್ನು ಓದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments