Webdunia - Bharat's app for daily news and videos

Install App

ಏಕದಿನ ಸರಣಿ ಭಾರತ ಬಾಚಿಕೊಳ್ಳಲಿದೆ: ದಾದಾ ಭವಿಷ್ಯ

Webdunia
ಸೋಮವಾರ, 17 ಅಕ್ಟೋಬರ್ 2011 (13:44 IST)
ಇತ್ತೀಚೆಗಷ್ಟೇ ಆಂಗ್ಲರ ನಾಡಿನಲ್ಲಿ ನಡೆದ ಸರಣಿಯಲ್ಲಿ ಭಾರತ ಹೀನಾಯ ಸೋಲು ಅನುಭವಿಸಿರಬಹುದು. ಆದರೆ ಪ್ರಸ್ತುತ ಇಂಗ್ಲೆಂಡ್ ವಿರುದ್ಧವೇ ಸಾಗುತ್ತಿರುವ ಏಕದಿನ ಸರಣಿಯನ್ನು ಮಹೇಂದ್ರ ಸಿಂಗ್ ಧೋನಿ ಬಳಗ ವಶಪಡಿಸಿಕೊಳ್ಳಲಿದೆ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭಾರತ ತಂಡವು ಅತ್ಯಂತ ಪ್ರಬಲವಾಗಿದ್ದು, ಯಾವುದೇ ತಂಡವನ್ನಾದರೂ ಜಗತ್ತಿನ ಯಾವುದೇ ಕಡೆ ಮಣಿಸುವ ಸಾಮರ್ಥ್ಯ ಹೊಂದಿದೆ ಎಂದು 'ಬಂಗಾಳದ ಹುಲಿ' ಖ್ಯಾತಿಯ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಬೇಕು ಎಂಬುದನ್ನು ಗಂಗೂಲಿ ಬಯಸಿದರು. ಸುರೇಶ್ ರೈನಾ ಪ್ರತಿಭಾವಂತ ಆಟಗಾರ ಆದರೆ ಅವರಿದನ್ನು ಸಾಬೀತುಪಡಿಸಬೇಕಾದ ಅಗತ್ಯವಿದೆ ಎಂದು ದಾದಾ ವಿವರಿಸಿದರು.

ಏತನ್ಮಧ್ಯೆ ಗಾಯದ ಸಮಸ್ಯೆಯೇ ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಭಾರತಕ್ಕೆ ಮುಳುವಾಗಿ ಪರಿಣಮಿಸಿತ್ತು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಪ್ರಮುಖವಾಗಿ ಜಹೀರ್ ಖಾನ್ ಅಲಭ್ಯರಾಗಿರುವುದು ತಂಡದ ಬೌಲಿಂಗ್ ವಿಭಾಗವನ್ನು ದುರ್ಬಲಗೊಳಿಸಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೇ ಮುಂಬರುವ ಆಸ್ಟ್ರೇಲಿಯಾ ಪ್ರವಾಸವು ಭಾರತದ ಪಾಲಿಗೆ ಮಹತ್ತರ ಸವಾಲಾಗಿರಲಿದೆ ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್, ರಣಜಿ ಮುಂದುವರಿಸಲಿದ್ದೇನೆ...
ಇದೇ ಸಂದರ್ಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಹಾಗೂ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ತನ್ನ ಸೇವೆಯನ್ನು ಮುಂದುವರಿಸುವುದಾಗಿ ಗಂಗೂಲಿ ತಿಳಿಸಿದರು. ಪ್ರಸ್ತುತ ಕ್ರಿಕೆಟ್‌ನಲ್ಲಿ ವೀಕ್ಷಕ ವಿವರಣೆಗಾರನ ಪಾತ್ರವನ್ನು ಆನಂದಿಸುವುದಾಗಿ ತಿಳಿಸಿದ್ದಾರೆ.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments