Webdunia - Bharat's app for daily news and videos

Install App

ಐಸಿಸಿ ರ‌್ಯಾಂಕಿಂಗ್: ಮೇಲಕ್ಕೇರಿದ ಧೋನಿ; ಸೆಹ್ವಾಗ್ ಕುಸಿತ

Webdunia
ಗುರುವಾರ, 23 ಫೆಬ್ರವರಿ 2012 (02:01 IST)
WD
ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಏಕದಿನ ಬ್ಯಾಟ್ಸ್‌ಮನ್‌ಗಳ ರ‌್ಯಾಂಕಿಂಗ್ ಪಟ್ಟಿಯಲ್ಲಿ ಎರಡು ಸ್ಥಾನಗಳ ನೆಗೆತ ಕಂಡಿರುವ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

ಅದೇ ಹೊತ್ತಿಗೆ ಪ್ರಸಕ್ತ ಸಿಬಿ ಸಿರೀಸ್ ಪಂದ್ಯಾವಳಿಯಲ್ಲಿ ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ಭಾರತದ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ನಾಲ್ಕು ಸ್ಥಾನಗಳ ಇಳಿಕೆ ಕಂಡು 18ಕ್ಕೆ ತಲುಪಿದ್ದಾರೆ.

ಉದಯೋನ್ಮುಖ ಬ್ಯಾಟ್ಸ್‌ಮನ್ ಈಗಲೂ ಭಾರತೀಯರ ಪೈಕಿ ಅಗ್ರರೆನಿಸಿದ್ದು, ಮೂರನೇ ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ. ಈ ವಿಭಾಗವನ್ನು ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ ಮುನ್ನಡೆಸುತ್ತಿದ್ದು, ಅವರ ಸಹ ಆಟಗಾರ ಅಬ್ರಹಾಂ ಡಿ ವಿಲಿಯರ್ಸ್ ನಂತರದ ಸ್ಥಾನದಲ್ಲಿದ್ದಾರೆ.

ತ್ರಿಕೋನ ಏಕದಿನ ಸರಣಿಯಲ್ಲಿ ಸತತ ಎರಡು ಬಾರಿಗೆ 90 ರನ್ನುಗಳ ಸಾಧನೆ ಮಾಡಿದ್ದ ಮತ್ತೊಬ್ಬ ಆರಂಭಿಕ ಗೌತಮ್ ಗಂಭೀರ್, ಆರು ಸ್ಥಾನಗಳ ಮುನ್ನಡೆ ಪಡೆದು ಅಗ್ರ 15ರ ಪಟ್ಟಿಯೊಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೌಲರುಗಳ ಪಟ್ಟಿಯಲ್ಲಿ ಮೂರು ಸ್ಥಾನಗಳ ನೆಗೆತ ಕಂಡಿರುವ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 11ನೇ ಸ್ಥಾನದಲ್ಲಿದ್ದು, ಅಗ್ರ 20 ಪಟ್ಟಿಯಲ್ಲಿ ಕಾಣಿಸಿಕೊಂಡಿರುವ ಭಾರತದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ. ಈ ವಿಭಾಗದಲ್ಲಿ ಎರಡು ಸ್ಥಾನಗಳ ಹಿನ್ನಡೆ ಅನುಭವಿಸಿರುವ ಅನುಭವಿ ವೇಗಿ ಜಹೀರ್ ಖಾನ್ 30ನೇ ಸ್ಥಾನದಲ್ಲಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments