Webdunia - Bharat's app for daily news and videos

Install App

ಪಾಕ್ ವಿರುದ್ಧ ಉತ್ತಮ ಪ್ರದರ್ಶನ: ಸೆಹವಾಗ್

Webdunia
ಭಾನುವಾರ, 28 ಅಕ್ಟೋಬರ್ 2007 (12:54 IST)
ಸ್ಫೋಟಕಕಾರಿ ಆರಂಭಿಕ ಆಟಗಾರ ವೀರೇಂದ್ರ ಸೆಹವಾಗ್, ಪಾಕಿಸ್ತಾನದ ವಿರುದ್ಧ ಮುಂದಿನ ತಿಂಗಳು ತವರು ನೆಲದಲ್ಲಿ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.

ನವೆಂಬರ್ ಐದರಿಂದ ಪಾಕಿಸ್ತಾನದ ವಿರುದ್ಧ ಐದು ಏಕದಿನ ಪಂದ್ಯಗಳ ಸರಣಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ಭಾರತ ಕ್ರಿಕೆಟ್ ತಂಡವನ್ನು ಶನಿವಾರ ಆಯ್ಕೆ ಮಾಡಲಾಗಿದ್ದು, ಸೆಹವಾಗ್ ಮತ್ತೊಮ್ಮೆ ಸ್ಥಾನ ಪಡೆದಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

" ನನ್ನ ಆಯ್ಕೆಯ ಕುರಿತು ಆಶಾದಾಯಕನಾಗಿದ್ದೆ. ಏಕೆಂದರೆ, ಪಾಕಿಸ್ತಾನದ ವಿರುದ್ಧ ಈ ಹಿಂದೆ ಉತ್ತಮ ಪ್ರದರ್ಶನ ನೀಡಿದ್ದೇನೆ. ಅದೇ ಪ್ರದರ್ಶನ ಮಟ್ಟವನ್ನು ಮುಂದೆಯೂ ಕಾಯ್ದುಕೊಂಡು ಹೋಗುವ ಆತ್ಮವಿಶ್ವಾಸ ತಮಗಿದೆ"ಎಂದವರು ತಂಡಕ್ಕೆ ಆಯ್ಕೆಗೊಂಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿದರು.

ರಾಹುಲ್ ಅವರನ್ನು ಕೈಬಿಟ್ಟಿದ್ದಕ್ಕೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೆಹವಾಗ್ "ರಾಹುಲ್, ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದು, ಅವರನ್ನು ಪಾಕ್ ವಿರುದ್ಧದ ಸರಣಿಗೆ ಕೈ ಬಿಟ್ಟಿದ್ದಕ್ಕೆ ತುಂಬಾ ನೋವಾಗಿದೆ" ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಧೋನಿ ನಾಯಕತ್ವದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸೆಹವಾಗ್, "ಭಾರತ ತಂಡವನ್ನು ಭವಿಷ್ಯದಲ್ಲಿ ಮುನ್ನಡೆಸಲು ಧೋನಿ ಸಮರ್ಥವಾದ ನಾಯಕ. ಫೀಲ್ಡ್‌ನಲ್ಲಿದ್ದಾಗ ಅವರ ಯೋಚನೆ ಮತ್ತು ಯೋಜನೆಗಳು ತೀವ್ರಗೊಂಡಿರುತ್ತವೆ" ಎಂದು ಸೆಹವಾಗ್, ಧೋನಿ ಬಗ್ಗೆ ಪ್ರಶಂಸೆಯ ಸುರಿಮಳೆಗೈದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments