Webdunia - Bharat's app for daily news and videos

Install App

ಮ್ಯಾಚ್ ಫಿಕ್ಸಿಂಗ್; ಗುಟ್ಟು ಬಿಡದ ಹಷನ್ ತಿಲಕರತ್ನೆ

Webdunia
ಮಂಗಳವಾರ, 3 ಮೇ 2011 (17:23 IST)
1992 ರಿಂದಲೇ ಶ್ರೀಲಂಕಾ ಕ್ರಿಕೆಟ್‌ನಲ್ಲಿ ಮೋಸದಾಟ ನಡೆಯುತ್ತಿದೆ ಎಂದು ಬಾಂಬ್ ಸಿಡಿಸಿದ್ದ ಶ್ರೀಲಂಕಾ ಮಾಜಿ ನಾಯಕ ಹಷನ್ ತಿಲಕರತ್ನೆ, ಯಾವೆಲ್ಲ ಆಟಗಾರರು ಮೋಸದಾಟ ಪಾಲ್ಗೊಂಡಿದ್ದಾರೆ ಎಂಬುದನ್ನು ಐಸಿಸಿ ಬಳಿ ಮಾತ್ರ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.

ನಾನು ನೀಡಿದ್ದ ಹೇಳಿಕೆಯಲ್ಲಿ ಸ್ಥಿರವಾಗಿದ್ದೇನೆ. ಆದರೆ ಭದ್ರತಾ ಭೀತಿಯಿಂದಾಗಿ ಹೆಸರನ್ನು ಬಹಿರಂಗಪಡಿಸುತ್ತಿಲ್ಲ. ಇದನ್ನು ಐಸಿಸಿ ಸಮ್ಮುಖದಲ್ಲಿ ಮಾತ್ರ ಹೊರಗೆಡವುತ್ತೇನೆ ಎಂದವರು ಸ್ಪಷ್ಟಪಡಿಸಿದರು.

ಶ್ರೀಲಂಕಾ ಸ್ಥಳೀಯ ಚಾನೆಲ್‌ವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದ ಹಷನ್, ಸದ್ಯದಲ್ಲೇ ಕೆಲವು ಆಟಗಾರರ ಹೆಸರುಗಳನ್ನು ಬಹಿರಂಗಪಡಿಸುವುದಾಗಿ ತಿಳಿಸಿದರು.

ನನ್ನ ಆತ್ಮಸಾಕ್ಷಿಯಾಗಿ ಹೇಳ್ತೀನಿ ಶ್ರೀಲಂಕಾ ಕ್ರಿಕೆಟ್‌ನಲ್ಲಿ ಕಳ್ಳಾಟ ಇಂದು ಅಥವಾ ನಿನ್ನೆಯಿಂದ ಆರಂಭಿಸಿದ ಪ್ರಕ್ರಿಯೆಯಲ್ಲ. ಇದು 1992ರಿಂದಲೇ ನಡೆಯುತ್ತಿದೆ ಎಂದವರು ಹೇಳಿದರು. ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದ್ದ ಸಮಕಾಲೀನ ಕ್ರಿಕೆಟಿಗರು, ಮೊದಲಿಗೆ ತಮ್ಮ ಆರೋಪಗಳನ್ನು ಹಷನ್ ಸಾಬೀತುಪಡಿಸಲಿ ಎಂದು ಸವಾಲು ಹಾಕಿದ್ದರು.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments