Webdunia - Bharat's app for daily news and videos

Install App

ಯಾವುದೇ ಕ್ರಮಾಂಕವಾದರೂ ಬ್ಯಾಟಿಂಗ್ ಮಾಡಲು ಸಿದ್ಧ: ಅಜಿಂಕ್ಯಾ ರಹಾನೆ

Webdunia
ಬುಧವಾರ, 28 ಸೆಪ್ಟಂಬರ್ 2011 (09:09 IST)
ಇತ್ತೀಚೆಗಿನ ಇಂಗ್ಲೆಂಡ್ ಪ್ರವಾಸದಲ್ಲಿ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲೂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಮುಂಬೈನ ಉದಯೋನ್ಮುಖ ಆರಂಭಿಕ ಬ್ಯಾಟ್ಸ್‌ಮನ್ ಅಜಿಂಕ್ಯಾ ರಹಾನೆ, ಯಾವುದೇ ಕ್ರಮಾಂಕದಲ್ಲಾದರೂ ಬ್ಯಾಟಿಂಗ್ ಮಾಡಲು ಸಿದ್ಧನಾಗಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ತಮಗೆ ದೊರಕಿದ್ದ ಕೆಲವೇ ಕೆಲವು ಅವಕಾಶಗಳನ್ನು ಚೆನ್ನಾಗಿಯೇ ಬಳಸಿಕೊಂಡಿದ್ದ ರಹಾನೆ ಅವರನ್ನು ಭಾರತದ ಭವಿಷ್ಯದ ಸ್ಟಾರ್ ಎಂದೇ ಪರಿಗಣಿಸಲಾಗುತ್ತಿದೆ. ಸ್ಫೋಟಕ ಆರಂಭಿಕ ವೀರೇಂದ್ರ ಸೆಹ್ವಾಗ್ ಸ್ಥಾನವನ್ನು ತುಂಬುವಲ್ಲಿ ರಹಾನೆ ನಡೆಸಿದ ಪ್ರಯತ್ನವು ಕ್ರಿಕೆಟ್ ಪಂಡಿತರ ಮೆಚ್ಚುಗೆಗೆ ಪಾತ್ರವಾಗಿತ್ತು.

ಇಂಗ್ಲೆಂಡ್ ವಿರುದ್ಧದ ಏಕೈಕ ಟ್ವೆಂಟಿ-30 ಪಂದ್ಯವನ್ನು ಕಳೆದುಕೊಂಡಿದ್ದ ಭಾರತ ಏಕದಿನ ಸರಣಿಯಲ್ಲೂ 0-4 ಅಂತರದ ಮುಖಭಂಗಕ್ಕೆ ಒಳಗಾಗಿತ್ತು. ಹೀಗಿದ್ದರೂ ಪ್ರಭಾವಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ 23ರ ಹರೆಯದ ರಹಾನೆ ಎರಡು ಅರ್ಧಶತಕಗಳ ಸಾಧನೆಯನ್ನು ಮಾಡಿದ್ದರು.

ಭುಜ ನೋವಿನಿಂದ ಚೇತರಿಕೆ ಹಾದಿಯಲ್ಲಿರುವ ವೀರೇಂದ್ರ ಸೆಹ್ವಾಗ್ ಆಗಮನದ ವೇಳೆ ರಹಾನೆ ಮತ್ತೆ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ.

ಆರಂಭದ ಕೆಲವು ರಣಜಿ ಟ್ರೋಫಿ ಪಂದ್ಯಾವಳಿಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ನಾನು ಮುಂದಿನ ಎರಡು ವರ್ಷಗಳಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೇನೆ. ಆದರೆ ಅಂತರಾಷ್ಟ್ರೀಯ ಕ್ರಿಕೆಟ್‌ ಆಡುವಾಗ ನೀವು ಯಾವುದೇ ಕ್ರಮಾಂಕದಲ್ಲಾದರೂ ಬ್ಯಾಟಿಂಗ್ ಮಾಡಲು ತಯಾರಾಗಿರಬೇಕು ಎಂದು ರಹಾನೆ ತಿಳಿಸಿದ್ದಾರೆ.

ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಗೌತಮ್ ಗಂಭೀರ್ ಅವರು ಸಹಜವಾಗಿಯೇ ತಂಡಕ್ಕೆ ಪರಿಗಣಿಸಲ್ಪಡುತ್ತಾರೆ. ಇದರಿಂದಾಗಿ ಪ್ರತಿಯೊಂದು ಸ್ಥಾನಕ್ಕೂ ಸ್ಪರ್ಧೆ ಸೃಷ್ಟಿಯಾಗುತ್ತದೆ. ಭಾರತೀಯ ತಂಡಕ್ಕೆ ಆಯ್ಕೆಯಾಗುವುದು ಬಹಳ ಕಷ್ಚ. ಆದರೆ ತಂಡದಲ್ಲಿದ್ದುಕೊಂಡು ಸುದೀರ್ಘ ಕಾಲದ ವರೆಗೆ ಸ್ಥಿರ ಪ್ರದರ್ಶನ ಇನ್ನೂ ಕಷ್ಟ ಎಂದಿದ್ದಾರೆ.

ನಾನೀಗ ಕಠಿಣ ಪರಿಶ್ರಮ ಮುಂದುವರಿಸಿದ್ದು, ಕ್ರಿಕೆಟ್ ಮೇಲೆ ಗಮನ ಕೇಂದ್ರಿಕರಿಸಿದ್ದೇನೆ. ಆಯ್ಕೆ ಬಗ್ಗೆ ವಿಚಾರಗಳನ್ನು ಗಮನಕ್ಕೆ ತೆಗೆದುಕೊಳ್ಳದೆ ಸಿಕ್ಕಿದ ಅವಕಾಶದಲ್ಲಿ ಉತ್ತಮ ಪ್ರದರ್ಶನ ನೀಡುವುದು ಗುರಿ ಎಂದಿದ್ದಾರೆ.

ನನ್ನ ಡೆಬ್ಯುಟ್ ಪಂದ್ಯದ ನಂತರ ನನ್ನ ಬಳಿ ಬಂದಿದ್ದ ಸಚಿನ್ ತೆಂಡೂಲ್ಕರ್, ಚೆನ್ನಾಗಿ ಬ್ಯಾಟಿಂಗ್ ಮಾಡಿದ್ದೀಯಾ ಎಂದು ಬೆನ್ನು ತಟ್ಟಿದರು. ನಂತರ ರಾಹುಲ್ ದ್ರಾವಿಡ್ ಹಾಗೂ ಮಹೇಂದ್ರ ಸಿಂಗ್ ಧೋನಿ ಸಹ ಕೆಲವು ಟಿಪ್ಸ್‌ಗಳನ್ನು ನೀಡಿದರು. ಅವರಂತಹ ದಿಗ್ಗಜ ಆಟಗಾರರ ನನಗೆ ಸಲಹೆ ನೀಡುವುದರೆಂದರೆ ನನ್ನ ಪಾಲಿಗೆ ದೊಡ್ಡ ವಿಚಾರವಾಗಿದೆ ಎಂದು ರಹಾನೆ ತಿಳಿಸಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 67ರ ಸರಾಸರಿ ಹೊಂದಿರುವ ರಹಾನೆ, ಟೆಸ್ಟ್ ಕ್ರಿಕೆಟ್ ಆಡುವುದೇ ನನ್ನ ಕಟ್ಟಕಡೆಯ ಗುರಿ ಎಂದಿದ್ದಾರೆ. ಭಾರತದ ಟೆಸ್ಟ್ ತಂಡವನ್ನು ಪ್ರತಿನಿಧಿಸುವುದೇ ನನ್ನ ಕನಸಾಗಿದೆ. ಆದರೆ ಯಾವತ್ತೂ ಸಹ ಆಯ್ಕೆ ಬಗ್ಗೆ ಯೋಚಿಸುವುದಿಲ್ಲ. ಯಾವುದೇ ರೀತಿಯ ಆಟವಾದರೂ ಉತ್ತಮ ನಿರ್ವಹಣೆ ನೀಡುವುದರತ್ತ ನನ್ನ ಗಮನ ಇರಲಿದೆ ಎಂದರು.

ವೆಬ್‌ದುನಿಯಾ ಕನ್ನಡ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments