Webdunia - Bharat's app for daily news and videos

Install App

ಆಸೀಸ್ ಸರಣಿಯತ್ತ ದೃಷ್ಟಿ ನೆಟ್ಟಿರುವ ಪೂಜಾರ

Webdunia
ಶನಿವಾರ, 20 ಆಗಸ್ಟ್ 2011 (17:43 IST)
ಪ್ರಸ್ತುತ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಉದಯೋನ್ಮುಖ ಭರವಸೆಯ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಮುಂಬರುವ ಬಹುನಿರೀಕ್ಷಿತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮೇಲೆ ದೃಷ್ಟಿ ನೆಟ್ಟಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಡಿಸೆಂಬರ್-ಜನವರಿ ತಿಂಗಳಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ವೇಳೆ ತಂಡಕ್ಕೆ ಪುನರಾಮನ ಮಾಡಿಕೊಳ್ಳುವ ಭರವಸೆಯನ್ನು ಸೌರಾಷ್ಟ್ರದ ಈ ಪ್ರತಿಭಾವಂತ ಯುವ ಬ್ಯಾಟ್ಸ್‌ಮನ್ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸಂದರ್ಭದಲ್ಲಿ ಪೂಜಾರ ತಮ್ಮ ಬಲ ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದರು. ಆನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಪೂಜಾರ ಇದೀಗ ಪುನಶ್ಚೇತನ ಶಿಬಿರದಲ್ಲಿದ್ದಾರೆ.

ಗಾಯದಿಂದಾಗಿ ವೆಸ್ಟ್‌ಇಂಡೀಸ್ ಹಾಗೂ ಇಂಗ್ಲೆಂಡ್ ಸರಣಿಗಳನ್ನು ಕಳೆದುಕೊಂಡಿರುವುದು ತೀವ್ರ ನೋವು ತರಿಸಿದೆ. ಇಂಗ್ಲೆಂಡ್‌ ಪ್ರವಾಸ ಕೈಗೊಳ್ಳಲು ನಾನು ಬಯಸಿದ್ದೆ. ಆದರೆ ಗಾಯವನ್ನು ನಿಯಂತ್ರಿಸುವಂತಿಲ್ಲ. ಈಗ ಪೂರ್ಣವಾಗಿ ಗುಣಮುಖರಾಗುವತ್ತ ಗಮನ ಹರಿಸಿದ್ದೇನೆ ಎಂದರು.

ಅಕ್ಟೋಬರ್ ಅಂತ್ಯದಲ್ಲಿ ಪೂರ್ಣ ಫಿಟ್ನೆಸ್ ಮರಳಿ ಪಡೆಯುವ ಭರವಸೆಯಿದೆ. ಆ ಮೂಲಕ ವರ್ಷಾಂತ್ಯದಲ್ಲಿ ನಡೆಯಲಿರುವ ಆಸೀಸ್ ಸರಣಿಗೆ ಲಭ್ಯನಾಗಲಿದ್ದೇನೆ ಎಂದು ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಪರಿಣಾಮಕಾರಿ ಬ್ಯಾಟಿಂಗ್ ಪ್ರದರ್ಶಿಸಿದ್ದ 23 ಹರೆಯದ ಪೂಜಾರ ತಿಳಿಸಿದರು.

' ಭವಿಷ್ಯದ ದ್ರಾವಿಡ್' ಎಂದೇ ಪರಿಗಣಿಸಲ್ಪಟ್ಟಿದ್ದ ಪೂಜಾರ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರಲ್ಲದೆ ಆಕ್ರಮಣಕಾರಿ 72 ರನ್ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆನಂತರ ನಡೆದ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಪರಿಣಾಮಕಾರಿ ಎನಿಸಿಕೊಳ್ಳಲು ವಿಫಲರಾಗಿದ್ದರು.

ಆಸೀಸ್ ವಿರುದ್ಧದ ಅರ್ಧಶತಕವು ನನಗೆ ಅತೀವ ಆತ್ಮವಿಶ್ವಾಸವನ್ನು ಒದಗಿಸಿದೆ. ಇಂತಹ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಬಹುದೆಂಬ ವಿಶ್ವಾಸ ಮೂಡಿತ್ತು. ಇಂತಹ ಸ್ವಯಂ ವಿಶ್ವಾಸ ಬಂದಾಗ ಕೆಲಸವು ಮತ್ತಷ್ಟು ಸುಲಬವಾಗುತ್ತದೆ. ಇದರಿಂದಾಗಿ ಮತ್ತೆ ಪುನರಾಮನ ಮಾಡಿಕೊಳ್ಳುವ ಸಂದರ್ಭದಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಸಾಮರ್ಥ್ಯ ನನ್ನಲ್ಲಿದೆ ಎಂಬ ಭಾವನೆ ಬರುತ್ತದೆ ಎಂದರು.

ಇಂಗ್ಲೆಂಡ್ ಸರಣಿಯಲ್ಲಿನ ಕಳಪೆ ಪ್ರದರ್ಶನದ ಹೊರತಾಗಿಯೂ ಈ ಇಂಗ್ಲಿಂಷ್ ಬ್ಯಾಟ್ಸ್‌ಮನ್ ತಮ್ಮ ತಂಡದ ಸಹ ಆಟಗಾರರ ಬೆಂಬಲಕ್ಕೆ ನಿಂತರು. ನಾವು ದಕ್ಷಿಣ ಆಫ್ರಿಕಾದಲ್ಲಿ ಉತ್ತಮ ಪ್ರದರ್ಶನ ನೀಡಿದ್ದೆವು. ಆದರೆ ಒಂದು ಕಳಪೆ ಸರಣಿಯಿಂದ ನಮ್ಮನ್ನು ಕೆಟ್ಟ ತಂಡ ಎಂದು ಹೇಳುವಂತಿಲ್ಲ. ನಾವು ಖಂಡಿತವಾಗಿಯೂ ತಿರುಗಿ ಬೀಳಲಿದ್ದೇವೆ ಎಂದಿದ್ದಾರೆ.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments