Select Your Language

Notifications

webdunia
webdunia
webdunia
webdunia

ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಇಲಾಖೆಯಿಂದ ಬಂಪರ್‌ ಆಫರ್‌

T20 WorldCup

Sampriya

ಶ್ರೀನಗರ , ಸೋಮವಾರ, 1 ಜುಲೈ 2024 (14:12 IST)
ಶ್ರೀನಗರ:  ಟಿ20 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ ಕ್ರಿಕೆಟ್‌ ತಂಡವನ್ನು ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ ಇಲಾಖೆ ಅಭಿನಂದಿಸಿದೆ. ಮಾತ್ರವಲ್ಲ, ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವಂತೆ ಭಾರತ ತಂಡಕ್ಕೆ ಆಹ್ವಾನ ನೀಡಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರವಾಸೋದ್ಯಮ ಇಲಾಖೆ, ಟಿ20 ವಿಶ್ವಕಪ್ 2024ರ ವಿಜೇತ ತಂಡವಾಗಿ ಹೊರಹೊಮ್ಮಿರುವ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮ ಚಾಂಪಿಯನ್ಸ್‌ಗಳು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವ ಮೂಲಕ ಮತ್ತೊಮ್ಮೆ ಸಂಭ್ರಮಿಸಬಹುದು. ನಿಮಗೆ ಆತಿಥ್ಯ ನೀಡುವುದು ನಮ್ಮ ಗೌರವವಾಗಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಶನಿವಾರ ನಡೆದ ಟಿ20 ವಿಶ್ವಕಪ್‌ನ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಭಾರತ ಸೋಲಿಸಿತು. ಈ ಮೂಲಕ 17 ವರ್ಷಗಳ ಬಳಿಕ ಭಾರತ ಟಿ20 ವಿಶ್ವಕಪ್‌ ಅನ್ನು ಮುಡಿಗೇರಿಸಿಕೊಂಡಿತು.

ಪ್ರಶಸ್ತಿ ಗೆದ್ದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಮತ್ತು ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರು ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕಪ್ ಗೆದ್ದ ಬಳಿಕ ಭಾರತಕ್ಕೆ ಮರಳಲು ಸಾಧ್ಯವಾಗದೇ ಟೀಂ ಇಂಡಿಯಾ ಕ್ರಿಕೆಟಿಗ ಒದ್ದಾಟ