Publish Date: Mon, 25 Dec 2017 (11:11 IST)
Updated Date: Mon, 25 Dec 2017 (11:23 IST)
ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾ ಬ್ಯಾಟ್ಸ್‌ಮನ್ ಎ.ಬಿ ಡಿವಿಲಿಯರ್ಸ್ ಅವರು ಭಾರತ ಹಾಗೂ ಜಿಂಬಾಬ್ವೆ ವಿರುದ್ಧದ ಟೆಸ್ಟ್ ಸರಣಿಗಳಲ್ಲಿ ಆಡಲಿದ್ದಾರಂತೆ. ಡಿವಿಲಿಯರ್ಸ್ 2016ರಲ್ಲಿ ತಮ್ಮ ನಾಯಕತ್ವದಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿ ಆಡಿದ್ದರು. ಆ ನಂತರ ಗಾಯದ ಸಮಸ್ಯೆಯಿಂದಾಗಿ ಟೆಸ್ಟ್ ಕ್ರಿಕೆಟ್‌ನಿಂದ ದೂರ ಸರಿದಿದ್ದರು.
ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ವಲ್ಪ ಕಾಲ ವಿರಾಮ ಪಡೆದುಕೊಂಡಿರುವ ಡಿವಿಲಿಯರ್ಸ್ ಮಂಗಳವಾರದಿಂದ ಆರಂಭವಾಗುವ ಜಿಂಬಾಬ್ವೆ ಎದುರಿನ ಪಂದ್ಯದಲ್ಲಿ ಅವರು ಆಡಲಿದ್ದಾರೆ.ಈ ಪಂದ್ಯಕ್ಕಾಗಿ ಅವರು ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರಂತೆ.
'ವಿರಾಟ್ ಕೊಹ್ಲಿ ಭಾರತ ತಂಡದ ನಾಯಕರಾಗಿ ತಮ್ಮ ಸಾಮರ್ಥ್ಯ ಹೆಚ್ಚಿಸಿಕೊಂಡಿದ್ದಾರೆ. ಮೊದಲು ನೋಡಿದ ಕೊಹ್ಲಿಯಂತೆ ಇಲ್ಲ ಸಾಕಷ್ಟು ಬದಲಾಗಿದ್ದಾರೆ. ತವರಿನಲ್ಲಿ ಭಾರತದ ಎದುರು ಸರಣಿ ಆಡಲು ತುಂಬಾ ಕಾತರನಾಗಿದ್ದೇನೆ' ಎಂದು ಡಿವಿಲಿಯರ್ಸ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ