ಮುಂಬೈ: ಹಿರಿಯ ವಿಕೆಟ್ ಕೀಪರ್ ಧೋನಿ ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಬಗ್ಗೆ ಮಾಜಿ ನಾಯಕ, ಕೋಚ್ ಅನಿಲ್ ಕುಂಬ್ಳೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಧೋನಿ ನಿವೃತ್ತಿಯಾಗುತ್ತಾರೋ ಇಲ್ಲಾ ಮುಂದಿನ ಟಿ20 ವಿಶ್ವಕಪ್ ನಲ್ಲಿ ಆಡುತ್ತಾರೋ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಈ ಬಗ್ಗೆ ಅನಿಲ್ ಕುಂಬ್ಳೆ ತಮ್ಮ ಅಭಿಪ್ರಾಯ ಹೇಳಿದ್ದಾರೆ.
ಮುಂಬರುವ ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಧೋನಿ ಚೆನ್ನೈ ತಂಡದ ನೇತೃತ್ವ ವಹಿಸುತ್ತಿದ್ದು, ಈ ಟೂರ್ನಿಯಲ್ಲಿ ಅವರ ಪ್ರದರ್ಶನ ಹೇಗಿರುತ್ತದೆ ಎಂಬುದರ ಮೇಲೆ ಅವರು ಮುಂದಿನ ಟಿ20 ವಿಶ್ವಕಪ್ ಆಡುವುದು ನಿರ್ಧಾರವಾಗಲಿದೆ ಎಂದು ಕುಂಬ್ಳೆ ಹೇಳಿದ್ದಾರೆ. ಬಹುಶಃ ಅದುವೇ ಧೋನಿ ಪಾಲಿನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿರಬಹುದು.