Publish Date: Sat, 06 Jan 2018 (11:00 IST)
Updated Date: Sat, 06 Jan 2018 (11:02 IST)
ಕೇಪ್ ಟೌನ್: ಭಾರತ ಮತ್ತು ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಕ್ಷಿಯಾಗಿದ್ದಾರೆ.
ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ ಪತ್ನಿ ರಿತಿಕಾ, ಶಿಖರ್ ಧವನ್ ಪತ್ನಿ ಆಯೆಷಾ, ಭುವನೇಶ್ವರ್ ಕುಮಾರ್ ಪತ್ನಿ ನೂಪುರ್ ಜತೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಅನುಷ್ಕಾ ತಂಡವನ್ನು ಹುರಿದುಂಬಿಸಿದರು.
ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಕೊಹ್ಲಿ ಪತ್ನಿಯೆದುರು ಬ್ಯಾಟಿಂಗ್ ನಲ್ಲಿ ವಿಫಲರಾಗಿದ್ದರೆ, ಭುವನೇಶ್ವರ್ ಕುಮಾರ್ ಮಾತ್ರ ಪತ್ನಿ ನೂಪುರ್ ಎದುರು ಬೌಲಿಂಗ್ ನಲ್ಲಿ ಭರ್ಜರಿ ಪ್ರದರ್ಶನ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ