Publish Date: Sat, 07 Oct 2017 (10:24 IST)
Updated Date: Sat, 07 Oct 2017 (10:26 IST)
ನವದೆಹಲಿ: ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿ ಸೋಲಿಗೆ ಟಿ20 ಸರಣಿಯಲ್ಲಿ ಸೇಡು ತೀರಿಸಿಕೊಳ್ಳುವ ತವಕದಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಗಿದೆ.
ಮೊದಲ ಪಂದ್ಯಕ್ಕೂ ಮೊದಲೇ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಭುಜಕ್ಕೆ ಗಾಯ ಮಾಡಿಕೊಂಡಿದ್ದು ಇಂದು ನಡೆಯಲಿರುವ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.
ಅಭ್ಯಾಸದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡ ಸ್ಟೀವ್ ಸ್ಮಿತ್ ರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್ ಮಾಡಿಸಲಾಯಿತು. ಗಾಯ ಗಂಭೀರವಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ಮಿತ್ ಹೊರಗುಳಿಯುವ ಸಾಧ್ಯತೆಯಿದೆ. ಅವರ ಬದಲಿಗೆ ಹೊಡೆ ಬಡಿಯ ಆರಂಭಿಕ ಡೇವಿಡ್ ವಾರ್ನರ್ ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ