ಸಿಡ್ನಿ: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗರಾಗಿದ್ದ ಆಂಡ್ರ್ಯೂ ಸೈಮಂಡ್ಸ್ ರಸ್ತೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದಾರೆ.
ಕ್ವೀನ್ಸ್ ಲ್ಯಾಂಡ್ ನಲ್ಲಿ ಕಾರು ಅಪಘಾತದಲ್ಲಿ ಸೈಮಂಡ್ಸ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹಾರ್ವೇ ರೇಂಜ್ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿದೆ. ಆದರೆ ಬೇರೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲ ಎಂದು ಮಾಧ‍್ಯಮ ವರದಿ ಹೇಳಿದೆ.
ಅವರ ನಿಧನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾ, ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ಭಾರತದ ವಿರುದ್ಧ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಹರ್ಭಜನ್ ಸಿಂಗ್ ಜೊತೆ ಮಂಕಿಗೇಟ್ ವಿವಾದದಲ್ಲಿ ಅವರೂ ಭಾಗಿಯಾಗಿದ್ದರು. ಈ ವೇಳೆ ತಮ್ಮ ವಿರುದ್ಧ ಭಜಿ ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಸೈಮಂಡ್ಸ್ ಆರೋಪಿಸಿದ್ದರು.