ಆರ್‌ಸಿಬಿ ವಿರುದ್ದದ ಗೆಲುವಿನ ನಂತರ ಸ್ಕ್ಯಾನ್‌ಗೊಳಗಾದ ವೆಂಕಟೇಶ್ ಅಯ್ಯರ್

Sampriya
ಶನಿವಾರ, 30 ಮಾರ್ಚ್ 2024 (16:11 IST)
Photo Courtesy X
ಬೆಂಗಳೂರು: ಇಲ್ಲಿನ ಕಂಠೀರವ ಸ್ಡೇಡಿಯಂನಲ್ಲಿ ನಡೆದ ಬೆಂಗಳೂರು ರಾಯಲ್ ಚಾಲೆಂಜರ್ಸ್‌ ವಿರುದ್ಧ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್‌ 7 ವಿಕೆಟ್‌ಗಳೊಂದಿಗೆ ರೋಚಕ ಜಯವನ್ನು ಸಾಧಿಸಿತು.

ಇನ್ನೂ ಕೆಕೆಆರ್‌ ಪರ ವೆಂಕಟೇಶ್ ಅಯ್ಯರ್ ಅಮೋಘ ಬ್ಯಾಟಿಂಗ್ ಮಾಡಿ ಅರ್ಧಶತಕವನ್ನು ಗಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. ಇನ್ನೂ ಆಟದ ಮಧ್ಯಭಾಗದಲ್ಲಿ ವೆಂಕಟೇಶ್ ಅಯ್ಯರ್ ಅವರು ತೀವ್ರವಾದ ಬೆನ್ನಿನ ನೋವನ್ನು ಅನುಭವಿಸಿದರು. ಈ ವೇಳೆ ವೈದ್ಯರಿಂದ ತಪಾಸಣೆಗೂ ಒಳಗಾದರು.

ಈ ಬಗ್ಗೆ ಗೆಲುವಿನ ನಂತರ ಮಾತನಾಡಿದ ವೆಂಕಟೇಶ್ ಅಯ್ಯರ್ ಅವರು ತಮ್ಮ ಬೆನ್ನಿನ ಗಾಯದ ಬಗ್ಗೆ ಹೇಳಿಕೊಂಡರು. ನನ್ನ ಬೆನ್ನಿನ ಆರೋಗ್ಯದ ಬಗ್ಗೆ ಸ್ಕ್ಯಾನ್ ಮಾಡಬೇಕಾಗಿದೆ ಎಂದು ಬಹಿರಂಗಪಡಿಸಿದರು. ಇದು ಸ್ವಲ್ಪ ಜಾಕ್ ಆಗಿದೆ, ಹೋಗಿ ಸ್ಕ್ಯಾನ್ ಮಾಡಬೇಕಾಗಿದೆ ಎಂದು ಹೇಳಿಕೊಂಡರು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 182 ರನ್‌ಗಳ ಗುರಿಯನ್ನು ಕೆಕೆಆರ್‌ಗೆ ನೀಡಿತು.  183 ರನ್‌ಗಳ ಗುರಿ ಬೆನ್ನತ್ತಿದ ಕೆಕೆಆರ್ ಆರಂಭಿಕರಾದ ಫಿಲ್ ಸಾಲ್ಟ್ (30) ಮತ್ತು ಸುನಿಲ್ ನರೈನ್ (47) ಅವರ ಉತ್ತಮ ಆರಂಭವನ್ನು ತಂದುಕೊಟ್ಟರು.

ಇನ್ನೂ ವೆಂಕಟೇಶ್ ಅಯ್ಯರ್ 30 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳೊಂದಿಗೆ 50 ರನ್ ಗಳಿಸಿದರು. ಇದೇ ವೇಳೆ ಕೆಕೆಆರ್ ಪರ ಶ್ರೇಯಸ್ ಅಯ್ಯರ್ (39*) ಮತ್ತು ರಿಂಕು ಸಿಂಗ್ (5*) ಮೊತ್ತದೊಂದಿಗೆ ರೋಚಕ ಜಯ ಸಾಧಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments