Webdunia - Bharat's app for daily news and videos

Install App

ರೇಪ್ ಕೇಸ್‌ನಲ್ಲಿ ಜೈಲುಪಾಲಾದ ವೇಗದ ಬೌಲರ್!

Webdunia
ಶುಕ್ರವಾರ, 9 ಜನವರಿ 2015 (09:23 IST)
ಬಾಂಗ್ಲಾ ಕ್ರಿಕೆಟ್ ತಂದ ಪ್ರಮುಖ ವೇಗದ ಬೌಲರ್ ರುಬೆಲ್ ಹುಸೇನ್ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ವಿಶ್ವಕಪ್‌ಗಾಗಿ ಆಯ್ಕೆ ಮಾಡಲಾದ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅವರೀಗ ಕಂಬಿ ಎಣಿಸುವಂತಾಗಿದೆ.
ಬಾಂಗ್ಲಾದೇಶದ ನಟಿ ನಜ್ನಿನ್ ಅಕ್ತರ್ ಹುಸೇನ್ ವಿರುದ್ಧ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಕೇಸ್ ವಿಚಾರಣೆ ನಡೆಸಿದ ಢಾಕಾ ಕೋರ್ಟ್ ಕ್ರಿಕೆಟಿಗನನ್ನು ಬಂಧಿಸುವಂತೆ ಆದೇಶ ಹೊರಡಿಸಿದೆ. ಹೀಗಾಗಿ ಬಹುಶಃ ಅವರು ವಿಶ್ವಕಪ್‌ನಲ್ಲಿ ಆಟವಾಡುವ ಅವಕಾಶದಿಂದ ವಂಚಿತರಾಗಲಿದ್ದಾರೆ.
 
24 ವರ್ಷದ ಕ್ರಿಕೆಟಿಗ ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ದೈಹಿಕವಾಗಿ ಬಳಸಿಕೊಂಡು ವಂಚನೆ ಮಾಡಿದ್ದಾರೆ ಎಂದು 19 ವರ್ಷದ ನಟಿ ಕಳೆದ ತಿಂಗಳು ದೂರು ದಾಖಲಿಸಿದ್ದರು. ಢಾಕಾ ಕೋರ್ಟ್‌ನಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು ಕ್ರಿಕೆಟಿಗನನ್ನು ಬಂಧಿಸುವಂತೆ ಕೋರ್ಟ್ ಆದೇಶಿಸಿದೆ. ಹುಸೇನ್ ಜಾಮೀನು ಅರ್ಜಿಯನ್ನು ಕೂಡ ಕೋರ್ಟ್ ವಜಾಗೊಳಿಸಿದೆ.
 
ಆತ ನನ್ನನ್ನು ಮದುವೆಯಾಗಲು ಒಪ್ಪಿದರೆ ಕೇಸ್ ಹಿಂತೆಗೆದು ಕೊಳ್ಳುತ್ತೇನೆ ಎಂದು ನಟಿ ಹೇಳಿದ್ದರು. ಆದರೆ ಇದಕ್ಕೊಪ್ಪದ ಹುಸೇನ್ ಆಕೆ ತನ್ನ ಮೇಲೆ ಹೊರಿಸಿದ ಆರೋಪ ನಿರಾಧಾರವಾದುದು ಎಂದು ಹೇಳಿ ಮದುವೆಯಾಗಲು ನಿರಾಕರಿಸಿದ್ದಾರೆ.
 
ಬಾಂಗ್ಲಾ ಪರ 22 ಟೆಸ್ಟ್ ಮತ್ತು 53 ಏಕದಿನ ಪಂದ್ಯಗಳನ್ನು ಆಡಿರುವ ಹುಸೇನ್ ಕ್ರಮವಾಗಿ 32 ಮತ್ತು 69 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ