Publish Date: Sat, 11 Nov 2017 (08:06 IST)
Updated Date: Sat, 11 Nov 2017 (08:08 IST)
ಮುಂಬೈ: ಸತತ ಕ್ರಿಕೆಟ್ ನಿಂದ ಬಳಲಿದ ಕಾರಣ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದ್ದು, ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೊಕ್ ನೀಡಿದೆ.
ಇಂದಿನಿಂದ ಶ್ರೀಲಂಕಾ ವಿರುದ್ಧ ಭಾರತ ಅಭ್ಯಾಸ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಭಾರತ ಅಧ್ಯಕ್ಷರ ಇಲೆವೆನ್ ತಂಡವನ್ನು ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸಂಜು ಸಾಮ್ಸನ್ ಮುನ್ನಡೆಸಲಿದ್ದಾರೆ.
ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಸತತವಾಗಿ ಕ್ರಿಕೆಟ್ ಆಡಿರುವ ಹಾರ್ದಿಕ್ ಪಾಂಡ್ಯಗೆ ಮುಂಬರುವ ಕ್ರಿಕೆಟ್ ವೇಳಾಪಟ್ಟಿಗಳನ್ನು ಗಮನದಲ್ಲಿಟ್ಟುಕೊಂಡು ವಿಶ್ರಾಂತಿ ನೀಡಲಾಗಿದೆ. ತಂಡದ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ