ನವದೆಹಲಿ: ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಇಂದು ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.
ದುಬೈನ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ- ಪಾಕ್ ಪಂದ್ಯ ನಡೆಯುತ್ತಿದೆ. ಎಂಟು ವರ್ಷಗಳ ಹಿಂದೆ ಪಾಕ್ ತಂಡವನ್ನು ಫೈನಲ್‌ನಲ್ಲಿ ಭಾರತವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿತ್ತು. ಈ ಬಾರಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಭಾರತದ ಗೆಲುವಿಗಾಗಿ ದೇಶದಾದ್ಯಂತ ಹೋಮ ಹವನಗಳು ನಡೆಯುತ್ತಿದೆ. ಬಿಹಾರದ ಪಟ್ನಾದಲ್ಲಿ ಟೀಮ್ ಇಂಡಿಯಾದ ಅಭಿಮಾನಿಗಳ ಭಾರತ ತಂಡದ ಗೆಲುವಿಗಾಗಿ ಹೋಮ ನಡೆಸಿದ್ದಾರೆ. ದುಬೈನಲ್ಲಿರುವ ಭಾರತೀಯರು ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದು, ಭಾರತ ತಂಡಕ್ಕೆ ಹಾರೈಸಿದ್ದಾರೆ.
ಕರ್ನಾಟಕದಲ್ಲೂ ಸಾಕಷ್ಟು ಕಡೆ ಅಭಿಮಾನಿಗಳು ಭಾರತ ತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ರಜಾ ದಿನವಾಗಿರುವುದಿಂದ ಪಂದ್ಯ ಆರಂಭಕ್ಕೆ ಎಲ್ಲರೂ ತುದಿಗಾಲಿನಲ್ಲಿ ನಿಂತಿದ್ದಾರೆ. ಎಂಟು ವರ್ಷಗಳ ಹಿಂದಿನ ಸೋಲಿಗೆ ಭಾರತ ಮುಯ್ಯಿ ತೀರಿಸಿಕೊಳ್ಳುವುದು ಪಕ್ಕಾ ಎಂಬುದು ಅಭಿಮಾನಿಗಳ ವಿಶ್ವಾಸ.