ರನ್ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯಿಂದ ಹೊರಗೆ ಬಂದು ವಿಶ್ರಾಂತಿ ಪಡೆಯಬೇಕು ಎಂದು ಭಾರತ ತಂಡದ ಮಾಜಿ ಕೋಚ್ ರವಿಶಾಸ್ತ್ರಿ ಸಲಹೆ ನೀಡಿದ್ದಾರೆ.
ಎರಡು ವರ್ಷಗಳಿಂದ ಶತಕದ ಮುಖವನ್ನೇ ಕಾಣದ ವಿರಾಟ್ ಕೊಹ್ಲಿ ಐಪಿಎಲ್ ನಲ್ಲೂ ಸತತ ವೈಫಲ್ಯ ಅನುಭವಿಸುತ್ತಿದ್ದು, ಸತತ ೨ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಲ್ಲದೇ ಒಂದೂ ಅರ್ಧಶತಕ ದಾಖಲಿಸಿಲ್ಲ.
ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ, ಕೊಹ್ಲಿ ಕಳೆದ ಕೆಲವು ವರ್ಷಗಳಿಂದ ನಾನ್ ಸ್ಟಾಪ್ ಕ್ರಿಕೆಟ್ ಆಡುತ್ತಿದ್ದಾರೆ. ಟೀಂ ಇಂಡಿಯಾವನ್ನು ಮೂರು ಪ್ರಕಾರಗಳಲ್ಲಿಯೂ ಮುನ್ನಡೆಸಿದ್ದರು ಸಮತೋಲನವನ್ನು ಕಾಪಾಡಿಕೊಳ್ಳುವ ಸಲುವಾಗಿ ಸ್ವಲ್ಪ ದಿನದ ಮಟ್ಟಿಗೆ ವಿರಾಮ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ಕೊಹ್ಲಿ ಬಯಸಿದರೆ ಐಪಿಎಲ್ನಿಂದ ವಿಶ್ರಾಂತಿ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಕಳೆದ 14-15 ವರ್ಷಗಳಿಂದ ಅನೇಕ ಆಟಗಾರರು ಭಾರತವನ್ನು ಪ್ರತಿನಿಧಿಸಿದ್ದಾರೆ. ಕೆಲವೊಂದು ಸಾರಿ ಉತ್ತುಂಗ್ಕೇರಲು ಬಯಸುವವರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ರವಿ ಶಾಸ್ತ್ರಿ ಆಭಿಪ್ರಾಯಪಟ್ಟಿದ್ದಾರೆ.