Webdunia - Bharat's app for daily news and videos

Install App

ಐಪಿಎಲ್‌ ನಿಂದ ಹೊರಗೆ ಬನ್ನಿ: ವಿರಾಟ್‌ ಕೊಹ್ಲಿಗೆ ಮಾಜಿ ಕೋಚ್‌ ರವಿಶಾಸ್ತ್ರಿ ಸಲಹೆ

Webdunia
ಬುಧವಾರ, 27 ಏಪ್ರಿಲ್ 2022 (18:24 IST)
ರನ್‌ ಬರ ಎದುರಿಸುತ್ತಿರುವ ವಿರಾಟ್‌ ಕೊಹ್ಲಿ ಐಪಿಎಲ್‌ ಟಿ-೨೦ ಕ್ರಿಕೆಟ್‌ ಟೂರ್ನಿಯಿಂದ ಹೊರಗೆ ಬಂದು ವಿಶ್ರಾಂತಿ ಪಡೆಯಬೇಕು ಎಂದು ಭಾರತ ತಂಡದ ಮಾಜಿ ಕೋಚ್‌ ರವಿಶಾಸ್ತ್ರಿ ಸಲಹೆ ನೀಡಿದ್ದಾರೆ.
ಎರಡು ವರ್ಷಗಳಿಂದ ಶತಕದ ಮುಖವನ್ನೇ ಕಾಣದ ವಿರಾಟ್‌ ಕೊಹ್ಲಿ ಐಪಿಎಲ್‌ ನಲ್ಲೂ ಸತತ ವೈಫಲ್ಯ ಅನುಭವಿಸುತ್ತಿದ್ದು, ಸತತ ೨ ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅಲ್ಲದೇ ಒಂದೂ ಅರ್ಧಶತಕ ದಾಖಲಿಸಿಲ್ಲ.
ವಿರಾಟ್‌ ಕೊಹ್ಲಿ ಫಾರ್ಮ್‌ ಬಗ್ಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ, ಕೊಹ್ಲಿ ಕಳೆದ ಕೆಲವು ವರ್ಷಗಳಿಂದ ನಾನ್ ಸ್ಟಾಪ್ ಕ್ರಿಕೆಟ್ ಆಡುತ್ತಿದ್ದಾರೆ. ಟೀಂ ಇಂಡಿಯಾವನ್ನು ಮೂರು ಪ್ರಕಾರಗಳಲ್ಲಿಯೂ ಮುನ್ನಡೆಸಿದ್ದರು ಸಮತೋಲನವನ್ನು ಕಾಪಾಡಿಕೊಳ್ಳುವ ಸಲುವಾಗಿ ಸ್ವಲ್ಪ ದಿನದ ಮಟ್ಟಿಗೆ ವಿರಾಮ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಲು ಕೊಹ್ಲಿ ಬಯಸಿದರೆ ಐಪಿಎಲ್ನಿಂದ ವಿಶ್ರಾಂತಿ ತೆಗೆದುಕೊಳ್ಳುವುದು ಸೂಕ್ತ ಎಂದು ಹೇಳಿದ್ದಾರೆ.
ಕಳೆದ 14-15 ವರ್ಷಗಳಿಂದ ಅನೇಕ ಆಟಗಾರರು ಭಾರತವನ್ನು ಪ್ರತಿನಿಧಿಸಿದ್ದಾರೆ. ಕೆಲವೊಂದು ಸಾರಿ ಉತ್ತುಂಗ್ಕೇರಲು ಬಯಸುವವರು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ರವಿ ಶಾಸ್ತ್ರಿ ಆಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

ಏಷ್ಯಾ ಕಪ್ 2025: ಭಾರತಕ್ಕೆ ಇಂದು ಯುಎಇ ಎದುರಾಳಿ, ಎಷ್ಟು ಗಂಟೆಗೆ ಮ್ಯಾಚ್

Asia Cup: ಏಷ್ಯಾ ಕಪ್ ಕ್ರಿಕೆಟ್ 2025 ಎಲ್ಲಿ ಲೈವ್ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಫೇಲ್

ಏಷ್ಯಾ ಕಪ್ ಚಾಂಪಿಯನ್ ಆದ ಭಾರತ ಹಾಕಿ ತಂಡಕ್ಕೆ ಅಭಿನಂದನೆಗಳ ಮಹಾಪೂರ

ಮುಂದಿನ ಸುದ್ದಿ
Show comments