ಮತ್ತೆ ಬ್ಯಾಟ್‌ ಹಿಡಿಯಲಿರುವ ಕ್ರಿಕೆಟ್‌ ದೇವರು ಸಚಿನ್ ತೆಂಡೂಲ್ಕರ್‌: ಯಾವ ತಂಡಕ್ಕಾಗಿ ಗೊತ್ತಾ

Sampriya
ಶುಕ್ರವಾರ, 14 ಫೆಬ್ರವರಿ 2025 (21:01 IST)
Photo Courtesy X
ಮುಂಬೈ: ಕ್ರಿಕೆಟ್‌ ದೇವರು ಖ್ಯಾತಿಯ ಸಚಿನ್‌ ತೆಂಡೂಲ್ಕರ್‌ ಮತ್ತೆ ಬ್ಯಾಟ್‌ ಹಿಡಿಯಲಿದ್ದಾರೆ. ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ಕ್ರಿಕೆಟ್‌ ದಿಗ್ಗಜ 12 ವರ್ಷಗಳ ಬಳಿಕ ಮತ್ತೆ ಕ್ರೀಸ್‌ಗೆ ಇಳಿಯುವರು.

51 ವರ್ಷದ ಸಚಿನ್ ತೆಂಡೂಲ್ಕರ್ ಅವರು ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್ (ಐಎಂಎಲ್) ಕ್ರಿಕೆಟ್ ಟೂರ್ನಿಯಲ್ಲಿ ಕ್ರಮವಾಗಿ ಭಾರತ ತಂಡದ ನಾಯಕತ್ವ ವಹಿಸಲಿದ್ದಾರೆ.

ಫೆಬ್ರುವರಿ 22 ರಿಂದ ಮಾರ್ಚ್‌ 16ರವರೆಗೆ ಟೂರ್ನಿಯು ನಡೆಯಲಿದೆ. ಮುಂಬೈ, ವಡೋದರಾ ಮತ್ತು ರಾಯಪುರದಲ್ಲಿ ಪಂದ್ಯಗಳು  ಆಯೋಜನೆಯಾಗಲಿವೆ. ಟೂರ್ನಿಯಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳೂ ಆಡಲಿವೆ.

ಭಾರತದ ಮಾಸ್ಟರ್ಸ್‌ ತಂಡದಲ್ಲಿ ಯುವರಾಜ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್ ಮತ್ತು ಅಂಬಟಿ ರಾಯುಡು ಸ್ಥಾನ ಪಡೆದಿದ್ದಾರೆ. ಸಚಿನ್ ನಾಯಕತ್ವದಲ್ಲಿ ಅವರು ಆಡಲಿದ್ದಾರೆ.

ದಿಗ್ಗಜ ವಿಕೆಟ್‌ಕೀಪರ್ ಕುಮಾರ ಸಂಗಕ್ಕಾರ ಶ್ರೀಲಂಕಾ ತಂಡಕ್ಕೆ ನಾಯಕರಾಗಿದ್ದಾರೆ. ಶ್ರೀಲಂಕಾ ಮಾಸ್ಟರ್ಸ್ ತಂಡದಲ್ಲಿ ಸ್ಫೋಟಕ ಶೈಲಿಯ ಆರಂಭಿಕ ಬ್ಯಾಟರ್ ರೊಮೇಶ್ ಕಲುವಿತರಣ, ವೇಗಿ ಸುರಾಂಗ್ ಲಕ್ಮಲ್ ಮತ್ತು ಉಪುಲ್ ತರಂಗಾ ಅವರು ಆಡಲಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮತ್ತೊಂದು ವಿಶ್ವದಾಖಲೆಯ ಹೊಸ್ತಿಲಲ್ಲಿ ರೋಕೊ ಜೋಡಿ: ಸಚಿನ್‌–ದ್ರಾವಿಡ್‌ ದಾಖಲೆಗೆ ಕುತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಮುಂದಿನ ಸುದ್ದಿ
Show comments