Publish Date: Sun, 16 Aug 2020 (18:36 IST)
Updated Date: Sun, 16 Aug 2020 (18:37 IST)
ಮುಂಬೈ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಹೃದಯಾಘಾತದಿಂದಾಗಿ ಇಂದು ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿಗೊಳಗಾಗಿದ್ದ ಅವರು ಲಕ್ನೋದ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದೆರಡು ದಿನಗಳಿಂದ ಅವರ ಆರೋಗ್ಯ ತೀರಾ ಬಿಗಡಾಯಿಸಿತ್ತು. ಇದೀಗ ಕಿಡ್ನಿ ವೈಫಲ್ಯ ಮತ್ತು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ. 73 ವರ್ಷ ವಯಸ್ಸಿನ ಚೇತನ್ ಚೌಹಾಣ್ ಇಂದು ಸಂಜೆ 4.30 ರ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ನಿಧನಕ್ಕೆ ಕ್ರಿಕೆಟ್ ಲೋಕ ಕಂಬನಿ ಮಿಡಿದಿದೆ.