Publish Date: Tue, 05 Mar 2019 (09:19 IST)
Updated Date: Tue, 05 Mar 2019 (09:20 IST)
ನವದೆಹಲಿ: ಕೆಲವು ದಿನಗಳ ಹಿಂದೆ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರಿವಾಬ ಜಡೇಜಾ ಸಮೇತರಾಗಿ ಪ್ರಧಾನಿ ಮೋದಿ ಭೇಟಿಯಾಗಿದ್ದರ ಹಿಂದಿನ ಸಂಭಾವ್ಯ ಕಾರಣ ಇದೀಗ ಬಯಲಾಗಿದೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಬೆನ್ನಲ್ಲೇ ಜಡೇಜಾ ಪತ್ನಿ ರಿವಾಬ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಹುಶಃ ಪಕ್ಷಕ್ಕೆ ಸೇರ್ಪಡೆಯಾಗುವ ಮೊದಲು ಪ್ರಧಾನಿ ಮೋದಿಯನ್ನು ಭೇಟಿಯಾಗಿ ರಿವಾಬ ಮತ್ತು ಪತಿ ರವೀಂದ್ರ ಜಡೇಜಾ ಈ ಬಗ್ಗೆ ಚರ್ಚಿಸಿರಬಹುದು.
ಕರ್ಣಿ ಸೇನಾ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ರಿವಾಬ ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆದರೆ ತಾನು ಪತಿ ಹೆಸರನ್ನು ಎಲ್ಲೂ ಬಳಕೆ ಮಾಡಲ್ಲ ಎಂದು ರಿವಾಬ ಹೇಳಿಕೊಂಡಿದ್ದಾರೆ. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಅವರು ಸ್ಪರ್ಧಿಸುತ್ತಾರಾ ಎಂಬುದು ಸ್ಪಷ್ಟವಾಗಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.