ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಆರ್ ಪಿ ಸಿಂಗ್ ತಂದೆ ಶಿವ ಪ್ರಸಾದ್ ಸಿಂಗ್ ಕೊರೋನಾಗೆ ಬಲಿಯಾಗಿದ್ದಾರೆ.
ಈ ಬಗ್ಗೆ ಕ್ರಿಕೆಟಿಗ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ. ಏಪ್ರಿಲ್ ನಲ್ಲಿಯೇ ಅವರು ಸೋಂಕಿತರಾಗಿದ್ದರು. ಈ ಹಿನ್ನಲೆಯಲ್ಲಿ ಆರ್ ಪಿ ಸಿಂಗ್ ಐಪಿಎಲ್ ನಿಂದ ಹೊರನಡೆದಿದ್ದರು.
ಆಸ್ಪತ್ರೆಗೆ ದಾಖಲಾಗಿದ್ದ ಶಿವ ಪ್ರಸಾದ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ಕ್ರಿಕೆಟ್ ಲೋಕ ಸಂತಾಪ ವ್ಯಕ್ತಪಡಿಸಿದೆ. ಇತ್ತೀಚೆಗೆ ಕ್ರಿಕೆಟಿಗ ಪಿಯೂಷ್ ಚಾವ್ಲಾ, ಚೇತನ್ ಸಕಾರಿಯಾ ತಂದೆ ಕೂಡಾ ಕೊರೋನಾದಿಂದ ಮೃತಪಟ್ಟಿದ್ದರು.