Publish Date: Sun, 21 Apr 2019 (13:59 IST)
Updated Date: Sun, 21 Apr 2019 (14:01 IST)
ನವದೆಹಲಿ: ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೋಟಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ ಸೇರಿದಂತೆ ಕ್ರಿಕೆಟಿಗರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ಸಂಭವಿಸಿದ ಸರಣಿ ಬಾಂಬ್ ಸ್ಪೋಟದಲ್ಲಿ 35 ವಿದೇಶಿಯರು ಸೇರಿದಂತೆ 150 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 400 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಈ ಪೈಶಾಚಿಕ ಕೃತ್ಯಕ್ಕೆ ಆಘಾತ ವ್ಯಕ್ತಪಡಿಸಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಆಪ್ತರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ಬರಲಿ ಎಂದು ಪ್ರಾರ್ಥಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ