Publish Date: Sat, 02 Feb 2019 (10:21 IST)
Updated Date: Sat, 02 Feb 2019 (10:22 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆ ಐದನೇ ಮತ್ತು ಅಂತಿಮ ಏಕದಿನ ಪಂದ್ಯ ನಡೆಯಲಿದ್ದು, ಹಿರಿಯ ಆಟಗಾರ ಧೋನಿ ಫಿಟ್ನೆಸ್ ಬಗ್ಗೆ ಕೋಚ್ ಸಂಜಯ್ ಬಂಗಾರ್ ಸ್ಪಷ್ಟನೆ ನೀಡಿದ್ದಾರೆ.
ಸ್ನಾಯು ಸೆಳೆತದಿಂದಾಗಿ ಧೋನಿ ಮೂರು ಮತ್ತು ನಾಲ್ಕನೇ ಏಕದಿನ ಪಂದ್ಯದಲ್ಲಿ ಆಡಿರಲಿಲ್ಲ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಲ್ಕನೇ ಏಕದಿನ ಪಂದ್ಯವನ್ನು ಭಾರತ ಹೀನಾಯವಾಗಿ ಸೋತಿತ್ತು.
ಈ ಹಿನ್ನಲೆಯಲ್ಲಿ ಕೆಳ ಕ್ರಮಾಂಕದಲ್ಲಿ ಧೋನಿ ಇದ್ದರೆ ತಂಡಕ್ಕೆ ಹೆಚ್ಚಿನ ಬಲ ಸಿಗುತ್ತಿತ್ತು ಎಂಬ ಅಭಿಪ್ರಾಯ ಕೇಳಿಬಂದಿತ್ತು. ಇದೀಗ ಧೋನಿ ಫಿಟ್ ಆಗಿದ್ದಾರೆಂದು ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಹೇಳಿದ್ದು, ನಾಳೆಯ ಪಂದ್ಯವನ್ನು ಆಡಲಿದ್ದಾರೆ ಎಂದಿದ್ದಾರೆ. ಇದು ಟೀಂ ಇಂಡಿಯಾ ಪಾಲಿಗೆ ಶುಭ ಸುದ್ದಿಯಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ