Publish Date: Mon, 25 Dec 2017 (10:44 IST)
Updated Date: Mon, 25 Dec 2017 (10:58 IST)
ಮುಂಬೈ: ಭಾರತದ ಏಕದಿನ ಮತ್ತು ಟ್ವೆಂಟಿ–20 ಕ್ರಿಕೆಟ್ ತಂಡದ ವಿಕೆಟ್‌ಕೀಪರ್ , ಕ್ಯಾಪ್ಟನ್ ಕೂಲ್ ಮಹೇಂದ್ರಸಿಂಗ್ ದೋನಿ ಅವರು 2019ರ ವಿಶ್ವಕಪ್ ಟೂರ್ನಿಯವರೆಗೆ ಆಡಲಿದ್ದಾರೆ ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್.ಕೆ. ಪ್ರಸಾದ್ ಹೇಳಿದ್ದಾರೆ.
‘ದೋನಿ ಅವರು ಈಗಲೂ ವಿಶ್ವದ ಶ್ರೇಷ್ಠ ವಿಕೆಟ್ ಕೀಪರ್. ಯುವ ವಿಕೆಟ್‌ಕೀಪರ್‌ಗಳು ದೋನಿ ಅವರ ಸ್ಥಾನ ತುಂಬಲು ಇನ್ನೂ ಸಾಕಷ್ಟು ಕಲಿಯಬೇಕಿದೆ’ ಎಂದು ಅವರು ಹೇಳಿದ್ದಾರೆ. ಇನ್ನು ಯುವ ವಿಕೆಟ್‌ಕೀಪರ್‌ಗಳಾದ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ನಮ್ಮ ನಿರೀಕ್ಷೆಯ ಮಟ್ಟ ತಲುಪಿಲ್ಲ. ಆದರೂ ಅವರಿಗೆ ಭಾರತ ‘ಎ’ ತಂಡದಲ್ಲಿ ಆಡುವ ಅವಕಾಶ ನೀಡಲಾಗಿದೆ. ಇದು ಅವರ ಪ್ರತಿಭೆಯನ್ನು ತೋರಿಸಲು ಇದೊಂದು ಒಳ್ಳೆಯ ಅವಕಾಶ. ದಿನೇಶ್ ಕಾರ್ತಿಕ್ ತಂಡದ ಎರಡನೇ ವಿಕೆಟ್ ಕೀಪರ್ ಆಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ