ಹೈದರಾಬಾದ್: ಕೊನೆಗೂ ರವಿಚಂದ್ರನ್ ಅಶ್ವಿನ್ ವಿಶ್ವದಾಖಲೆ ಕನಸು ನನಸಾಯ್ತು. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಏಕಮಾತ್ರ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಅವರು ಇತಿಹಾಸ ಬರೆದರು.
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ವೇಗದ 250 ವಿಕೆಟ್ ಪಡೆದ ವಿಶ್ವ ದಾಖಲೆ ಮಾಡಿದರು. ಈ ಪಂದ್ಯದಲ್ಲಿ ಅಂತಿಮ ವಿಕೆಟ್ ಪಡೆಯುವ ಮೂಲಕ ಅವರು ಈ ಇತಿಹಾಸ ಬರೆದರು. 45 ಪಂದ್ಯಗಳಿಂದ ಅವರು ಈ ದಾಖಲೆ ಮಾಡಿದರು.
ಇದರೊಂದಿಗೆ ಬಾಂಗ್ಲಾದೇಶ 388 ರನ್ ಗಳಿಗೆ ಆಲೌಟ್ ಆಯಿತು. ಭಾರತ ದಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 299 ರನ್ ಬೇಕು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ