ಬೆಂಗಳೂರು: ನಿನ್ನೆ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಟದಲ್ಲಿ ಆರ್‌ಸಿಬಿಯನ್ನು ಸೋಲಿಸಿದ ಬಳಿಕ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರ ಫೋಸ್ಟ್ ಇದೀಗ ಚರ್ಚೆಗೆ ಗ್ರಾಸವಾಗಿದೆ.
2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಅಮೋಘ ಜಯ ಸಾಧಿಸಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಶುಭಮನ್ ಗಿಲ್ ಅವರು ಮಾಡಿದ ಫೋಸ್ಟ್ ವೈರಲ್ ಆಗಿದೆ.
ಫೋಟೋ ಹಂಚಿ, 'ಆಟದ ಮೇಲೆ ಗಮನ, ಕಿರುಚಾಟದ ಮೇಲಲ್ಲ' ಎಂದು ಗಿಲ್ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದರು. ಯಾವ ಆಟಗಾರನನ್ನು ಗುರಿಯಾಗಿಸಿ ಗಿಲ್ ಪೋಸ್ಟ್ ಮಾಡಿದ್ದರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಈ ಫೋಸ್ಟ್ ನೋಡಿದ ಕ್ರಿಕಟ್ ಪ್ರಿಯರು ಇದು ಆರ್‌ಸಿಬಿಯ ಆಟಗಾರ ಕಿಂಗ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡು ಮಾಡಿದ ಪೋಸ್ಟ್ ಎಂದು ಹೇಳಿದ್ದಾರೆ.
ಭುವನೇಶ್ವರ್ ಕುಮಾರ್ ದಾಳಿಯಲ್ಲಿ ಶುಭಮನ್ ಗಿಲ್ ವಿಕೆಟ್ ಪತನದ ವೇಳೆ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದರು. ಆ ಮೂಲಕ ಸ್ಟಾರ್ ಆಟಗಾರನಿಗೆ 'ಸೆಂಡ್ ಆಫ್' ನೀಡಿದ್ದರು. ಇದಕ್ಕೆ ಪ್ರತಿಯಾಗಿ ಗಿಲ್ ಮಾರ್ಮಿಕ ಪೋಸ್ಟ್ ಹಾಕಿದ್ದಾರೆ ಎನ್ನಲಾಗಿದೆ.
ಅಭಿಮಾನಿಗಳು ಗಿಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಟೀಮ್ ಇಂಡಿಯಾದ 'ಓವರ್‌ರೇಟಡ್ ಆಟಗಾರ' ಎಂದು ಕೆಣಕಿದ್ದಾರೆ. ಮತ್ತೊಂದೆಡೆ ಪೋಸ್ಟ್‌ಗೆ ಸಂಬಂಧಿಸಿದಂತೆ ಗಿಲ್ ಈವರೆಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.