Webdunia - Bharat's app for daily news and videos

Install App

ಗಮನ ಆಟದ ಮೇಲೆ, ಕಿರುಚಾಟದ ಮೇಲಲ್ಲ: ಕಿಂಗ್‌ ಕೊಹ್ಲಿಗೆ ಟಾಂಗ್ ಕೊಟ್ರಾ ಶುಭಮನ್ ಗಿಲ್‌

Sampriya
ಗುರುವಾರ, 3 ಏಪ್ರಿಲ್ 2025 (17:28 IST)
Photo Courtesy X
ಬೆಂಗಳೂರು: ನಿನ್ನೆ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪಂದ್ಯಾಟದಲ್ಲಿ ಆರ್‌ಸಿಬಿಯನ್ನು ಸೋಲಿಸಿದ ಬಳಿಕ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ ಅವರ ಫೋಸ್ಟ್ ಇದೀಗ ಚರ್ಚೆಗೆ ಗ್ರಾಸವಾಗಿದೆ.

2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್‌ ಅಮೋಘ ಜಯ ಸಾಧಿಸಿತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಶುಭಮನ್ ಗಿಲ್ ಅವರು ಮಾಡಿದ ಫೋಸ್ಟ್ ವೈರಲ್ ಆಗಿದೆ.

ಫೋಟೋ ಹಂಚಿ,  'ಆಟದ ಮೇಲೆ ಗಮನ, ಕಿರುಚಾಟದ ಮೇಲಲ್ಲ' ಎಂದು ಗಿಲ್ ಮಾರ್ಮಿಕವಾಗಿ ಪೋಸ್ಟ್ ಮಾಡಿದ್ದರು. ಯಾವ ಆಟಗಾರನನ್ನು ಗುರಿಯಾಗಿಸಿ ಗಿಲ್ ಪೋಸ್ಟ್ ಮಾಡಿದ್ದರು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಈ ಫೋಸ್ಟ್ ನೋಡಿದ ಕ್ರಿಕಟ್ ಪ್ರಿಯರು ಇದು ಆರ್‌ಸಿಬಿಯ ಆಟಗಾರ ಕಿಂಗ್ ಕೊಹ್ಲಿಯನ್ನು ಗುರಿಯಾಗಿಸಿಕೊಂಡು ಮಾಡಿದ ಪೋಸ್ಟ್ ಎಂದು ಹೇಳಿದ್ದಾರೆ.

ಭುವನೇಶ್ವರ್ ಕುಮಾರ್ ದಾಳಿಯಲ್ಲಿ ಶುಭಮನ್ ಗಿಲ್ ವಿಕೆಟ್ ಪತನದ ವೇಳೆ ವಿರಾಟ್ ಕೊಹ್ಲಿ ಸಂಭ್ರಮಿಸಿದ್ದರು. ಆ ಮೂಲಕ ಸ್ಟಾರ್ ಆಟಗಾರನಿಗೆ 'ಸೆಂಡ್ ಆಫ್' ನೀಡಿದ್ದರು. ಇದಕ್ಕೆ ಪ್ರತಿಯಾಗಿ ಗಿಲ್ ಮಾರ್ಮಿಕ ಪೋಸ್ಟ್ ಹಾಕಿದ್ದಾರೆ ಎನ್ನಲಾಗಿದೆ.

ಅಭಿಮಾನಿಗಳು ಗಿಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಟೀಮ್ ಇಂಡಿಯಾದ 'ಓವರ್‌ರೇಟಡ್ ಆಟಗಾರ' ಎಂದು ಕೆಣಕಿದ್ದಾರೆ. ಮತ್ತೊಂದೆಡೆ ಪೋಸ್ಟ್‌ಗೆ ಸಂಬಂಧಿಸಿದಂತೆ ಗಿಲ್ ಈವರೆಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments