ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಆಟಗಾರ ವಿನೋದ್ ಕಾಂಬ್ಳಿ ಅವರ ಆರೋಗ್ಯ ವಾರಾಂತ್ಯದಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಧ್ಯಮಗಳಲ್ಲಿ ಭಿತ್ತರವಾದ ಸುದ್ದಿ ಪ್ರಕಾರ, ಶನಿವಾರ ತಡರಾತ್ರಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಥಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಒಂದು ಕಾಲದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಆಪ್ತಸ್ನೇಹಿತ, ದೀರ್ಘಕಾಲದ ಸಹ ಆಟಗಾರ ಕಾಂಬ್ಳಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿಂದೆಯೂ ಕಾಂಬ್ಳಿ ಆರೋಗ್ಯದ ಬಗ್ಗೆ ಊಹಾಪೋಹಗಳು ಹರಿದಾಡಿತ್ತು.
ಇತ್ತೀಚೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ತಮಗೆ ತರಬೇತಿ ನೀಡಿದ ದಿವಂಗತ ರಮಾಕಾಂತ್ ಅಚ್ರೇಕರ್ ಮತ್ತು ಸಚಿನ್ ತೆಂಡೂಲ್ಕರ್ ಅವರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಕಾಂಬ್ಳಿ ಭಾಗವಹಿಸಿದ್ದರು. ಹಲವಾರು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕಾಂಬ್ಳಿ ಸರಿಯಾಗಿ ನಡೆದುಕೊಳ್ಳಲು ಕಷ್ಟಪಡುತ್ತಿದ್ದರು.