Webdunia - Bharat's app for daily news and videos

Install App

ನಿವೃತ್ತಿಗೂ ಮೊದಲು ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಕಿಡಿ ಕಾರಿದ್ದ ಗೌತಮ್ ಗಂಭೀರ್

Webdunia
ಬುಧವಾರ, 5 ಡಿಸೆಂಬರ್ 2018 (08:37 IST)
ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಲು ವಿಫಲವಾದ ಸಿಎಂ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರಕ್ಕೆ ಹಸಿರು ನ್ಯಾಯಾಧಿಕರಣ 25 ಕೋಟಿ ರೂ. ದಂಡ ವಿಧಿಸಿದ ಬೆನ್ನಲ್ಲೇ ಕ್ರಿಕೆಟಿಗ ಗೌತಮ್ ಗಂಭೀರ್ ಕಿಡಿ ಕಾರಿದ್ದಾರೆ.


ತಮಗೆ ಅನಿಸಿದ್ದನ್ನು ರಾಜಕೀಯ ವಿಚಾರವಾದರೂ ನೇರವಾಗಿ ಪ್ರಶ್ನಿಸುವ ದೆಹಲಿ ಮೂಲದ ಕ್ರಿಕೆಟಿಗ ಗೌತಮ್ ಗಂಭೀರ್ ಇದೀಗ ಹಸಿರು ನ್ಯಾಯಾಧಿಕರಣ ವಿಧಿಸಿರುವ ದಂಡದ ಹಣವನ್ನು ಯಾರು ತೆರುತ್ತಾರೆ ಎಂದು ಸಿಎಂ ಕೇಜ್ರಿವಾಲ್ ಗೆ ಪ್ರಶ್ನಿಸಿದ್ದಾರೆ. ವಿಶೇಷವೆಂದರೆ ಕೆಲವೇ ಗಂಟೆಗಳ ಬಳಿಕ ಅವರು ಕ್ರಿಕೆಟ್ ಗೆ ನಿವೃತ್ತಿ ಹೇಳಿ ಮತ್ತೊಮ್ಮೆ ಸುದ್ದಿಯಾದರು.

ಕೇಜ್ರಿವಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗೌತಮ್ ಗಂಭೀರ್ ‘ಈಗ ದಂಡ ಯಾರು ತೆರಬೇಕು? ಖಂಡಿತಾ ನನ್ನಂತಹ ತೆರಿಗೆದಾರರು. ನನಗೆ ಏನಾದರೂ ಆಯ್ಕೆಗಳಿದ್ದರೆ, ದೆಹಲಿ ಸಿಎಂ ಅವರ ದೊಂಬರಾಟಕ್ಕೆ ನನ್ನ ತೆರಿಗೆ ಹಣ ಬಳಕೆ ಮಾಡಬೇಡಿ ಎಂದು ಹೇಳುತ್ತಿದ್ದೆ’ ಎಂದಿದ್ದಾರೆ.  ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದರೂ ಕೇಜ್ರಿವಾಲ್ ಸರ್ಕಾರ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಂಡ ವಿಧಿಸಲಾಗಿದೆ.

ಗಂಭೀರ್ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸುತ್ತಾರೆ ಎಂದು ಸುದ್ದಿಯಾಗಿತ್ತು. ಇದೀಗ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಿಸಿದ್ದು, ಈ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments