Publish Date: Sun, 17 Nov 2019 (10:35 IST)
Updated Date: Sun, 17 Nov 2019 (10:36 IST)
ನವದೆಹಲಿ: ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಇದೀಗ ದೆಹಲಿಯ ಬೀದಿ ಬೀದಿಯಲ್ಲಿ ರಾರಾಜಿಸುತ್ತಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ್ದರಿಂದ, ಅದರ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು.
ಆದರೆ ಗಂಭೀರ್ ಈ ಸಭೆಗೆ ಹಾಜರಾಗುವ ಬದಲು ಭಾರತ ಮತ್ತು ಬಾಂಗ್ಲಾ ನಡುವೆ ಇಂಧೋರ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಕ್ಕೆ ಪ್ರತಿಭಟನಾಕಾರರು ಗಂಭೀರ್ ಫೋಟೋ ಜತೆಗೆ ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಮಾಡಿ ಬೀದಿ ಬೀದಿಗಳಲ್ಲಿ ಹಂಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.