Publish Date: Sat, 02 Mar 2024 (18:23 IST)
Updated Date: Sat, 02 Mar 2024 (18:36 IST)
ನವದೆಹಲಿ :ತಮ್ಮನ್ನು ಪಕ್ಷದ ಹೊಣೆಗಾರಿಕೆಯಿಂದ ಮುಕ್ತರನ್ನಾಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಲ್ಲಿ ಮನವಿ ಮಾಡಿಕೊಂಡಿರುವ ಗೌತಮ್ ಗಂಭೀರ್ , ಮುಂದಿನ ದಿನಗಳಲ್ಲಿ ಕ್ರಿಕೆಟ್ ನಲ್ಲಿ ತಮ್ಮ ಭವಿಷ್ಯ ಕಂಡುಕೊಳ್ಳುವುದಾಗಿ ನುಡಿದಿದ್ದಾರೆ.ಬಿಜೆಪಿ ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ರಾಜಕೀಯ ಸನ್ಯಾಸ ಸ್ವೀಕರಿಸಿದ್ದಾರೆ.
ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಗೌತಮ್ ಗಂಭೀರ್ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ರಾಜಕೀಯ ಸನ್ಯಾಸವನ್ನು ಖಚಿತಪಡಿಸಿದ್ದಾರೆ. ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಸಧ್ಯಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಗೌತಮ್ ಗಂಭೀರ್ 2019 ರಲ್ಲಿ ದೆಹಲಿ ಉತ್ತರ ಕ್ಷೇತ್ರದಿಂದ ಭರ್ಜರಿ ಜಯ ಸಾಧಿಸಿದ್ದರು.