ರಾಜಕಾರಣಕ್ಕೆ ವಿದಾಯ ಹೇಳಿದ ಗೌತಮ್‌ ಗಂಭೀರ್‌

geetha
ಶನಿವಾರ, 2 ಮಾರ್ಚ್ 2024 (18:23 IST)
ನವದೆಹಲಿ :ತಮ್ಮನ್ನು ಪಕ್ಷದ ಹೊಣೆಗಾರಿಕೆಯಿಂದ ಮುಕ್ತರನ್ನಾಗಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ  ಅವರಲ್ಲಿ ಮನವಿ ಮಾಡಿಕೊಂಡಿರುವ ಗೌತಮ್‌ ಗಂಭೀರ್‌ , ಮುಂದಿನ ದಿನಗಳಲ್ಲಿ ಕ್ರಿಕೆಟ್‌  ನಲ್ಲಿ ತಮ್ಮ ಭವಿಷ್ಯ ಕಂಡುಕೊಳ್ಳುವುದಾಗಿ ನುಡಿದಿದ್ದಾರೆ.ಬಿಜೆಪಿ  ಸಂಸದ ಮತ್ತು ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌  ರಾಜಕೀಯ ಸನ್ಯಾಸ ಸ್ವೀಕರಿಸಿದ್ದಾರೆ. 

ಬಿಜೆಪಿಯಲ್ಲಿ ಸೇವೆ ಸಲ್ಲಿಸಲು ಅವಕಾಶ ನೀಡಿದ  ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ  ಗೌತಮ್‌ ಗಂಭೀರ್‌ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌  ಖಾತೆಯಲ್ಲಿ ಸಂದೇಶ ಹಂಚಿಕೊಳ್ಳುವ ಮೂಲಕ ತಮ್ಮ ರಾಜಕೀಯ ಸನ್ಯಾಸವನ್ನು ಖಚಿತಪಡಿಸಿದ್ದಾರೆ. ಬಿಜೆಪಿ ತನ್ನ ಲೋಕಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. 
 
ಸಧ್ಯಕ್ಕೆ ಕೋಲ್ಕತ್ತಾ ನೈಟ್‌ ರೈಡರ್ಸ್‌ ಐಪಿಎಲ್‌ ತಂಡದ ಮೆಂಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ 2019 ರಲ್ಲಿ ದೆಹಲಿ ಉತ್ತರ ಕ್ಷೇತ್ರದಿಂದ ಭರ್ಜರಿ ಜಯ ಸಾಧಿಸಿದ್ದರು. 
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments