Webdunia - Bharat's app for daily news and videos

Install App

ಗುಜರಾತ್‌ ಟೈಟನ್ಸ್‌ ತಂಡದ ಕ್ಯಾಪ್ಟನ್‌ ಗಿಲ್‌ಗೆ ₹ 12 ಲಕ್ಷ ದಂಡ: ನಿಧಾನಗತಿಯ ಓವರ್ ರೇಟ್‌ಗೆ ಶಿಕ್ಷೆ

Sampriya
ಬುಧವಾರ, 27 ಮಾರ್ಚ್ 2024 (14:26 IST)
Photo Courtesy X
ಚೆನ್ನೈ: ಐಪಿಎಲ್‌ನ 17ನೇ ಆವೃತ್ತಿಯ ಪಂದ್ಯದಲ್ಲಿ ಮಂಗಳವಾರ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 63 ರನ್​ಗಳಿಂದ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ಇದೀಗ ಟೈಟನ್ಸ್‌ ತಂಡದ ನಾಯಕ ಶುಭ್​ಮನ್ ಗಿಲ್ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಟೈಟಾನ್ಸ್ ನಾಯಕ ಶುಭ್​ಮನ್ ಗಿಲ್ ಅವರಿಗೆ ದಂಡ ವಿಧಿಸಲಾಗಿದೆ. ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆಯ ಅಡಿಯಲ್ಲಿ ಈ ಶಿಕ್ಷೆಗೆ ಒಳಗಾಗಿದ್ದಾರೆ.  

ಶುಭ್​ಮನ್ ಗಿಲ್ ₹ 12 ಲಕ್ಷ ದಂಡದ ಮೊತ್ತ ಪಾವತಿಸಬೇಕಿದೆ. ಐಪಿಎಲ್​ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್​ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಬೌಂಡರಿ ಲೈನ್​ನಿಂದ ಒಬ್ಬ ಫೀಲ್ಡರ್​ನನ್ನು ಕಡಿತ ಮಾಡಲಾಗುತ್ತದೆ. ಇದೇ ತಪ್ಪನ್ನು 2ನೇ ಬಾರಿ ಪುನರಾವರ್ತಿಸಿದರೆ ನಾಯಕನಿಗೆ ₹ 24 ಲಕ್ಷ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ 6 ಲಕ್ಷ ಅಥವಾ ಪಂದ್ಯದ ಶುಲ್ಕದ ಶೇ 25 ದಂಡವನ್ನು ವಿಧಿಸಲಾಗುತ್ತದೆ.

ಮೂರನೇ ಬಾರಿ ಈ ತಪ್ಪನ್ನು ಆವರ್ತಿಸಿದರೆ ತಂಡದ ನಾಯಕನಿಗೆ 30 ಲಕ್ಷ ದಂಡ ವಿಧಿಸಲಾಗುತ್ತದೆ. ಅಲ್ಲದೆ ನಾಯಕ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಲಿದ್ದಾರೆ. ಹಾಗೆಯೇ ಪ್ಲೇಯಿಂಗ್ ಇಲೆವೆನ್​ನ 10 ಆಟಗಾರರಿಗೆ ₹ 12 ಲಕ್ಷ ಅಥವಾ ಅವರ ಪಂದ್ಯದ ಶುಲ್ಕದ ಶೇ 50 ದಂಡವನ್ನು ವಿಧಿಸಲಾಗುತ್ತದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಗಿಲ್‌ ಎಚ್ಚರಿಕೆ ವಹಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments