Select Your Language

Notifications

webdunia
webdunia
webdunia
webdunia

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲೂ ಆಡುವುದು ಅನುಮಾನ?

ಹಾರ್ದಿಕ್ ಪಾಂಡ್ಯ ಐಪಿಎಲ್ ನಲ್ಲೂ ಆಡುವುದು ಅನುಮಾನ?
ಮುಂಬೈ , ಶನಿವಾರ, 23 ಫೆಬ್ರವರಿ 2019 (09:21 IST)
ಮುಂಬೈ: ಬೆನ್ನು ನೋವಿನ ಕಾರಣಕ್ಕೆ ಆಸ್ಟ್ರೇಲಿಯಾ ಸರಣಿಯಿಂದ ಹೊರಗುಳಿದಿರುವ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ ಭವಿಷ್ಯವೂ ತೂಗುಯ್ಯಾಲೆಯಲ್ಲಿದೆ.


ಇದೀಗ ವೈದ್ಯರು ಬೆನ್ನಿನ ಮಾಂಸ ಖಂಡ ಬಲಗೊಳಿಸುವಂತೆ ಚಿಕಿತ್ಸೆ ಪಡೆಯಲು ಸೂಚಿಸಿದ್ದಾರೆ. ಅಲ್ಲದೆ, ಮೂರು ವಾರಗಳ ವಿಶ್ರಾಂತಿಗೂ ಸೂಚಿಸಿದ್ದಾರೆ. ಹೀಗಾಗಿ ಎನ್ ಸಿಎಯಲ್ಲಿ ಮೂರು ವಾರಗಳ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಾಗುತ್ತದೆ.

ಐಪಿಎಲ್ ಕ್ರಿಕೆಟ್ ಮಾರ್ಚ್ 23 ರಿಂದ ಪ್ರಾರಂಭವಾಗಲಿದ್ದು, ಆ ವೇಳೆಗೆ ಸಂಪೂರ್ಣ ಫಿಟ್ ಆಗದೇ ಹೋದಲ್ಲಿ ವಿಶ್ವಕಪ್ ದೃಷ್ಟಿಯಿಂದ ಹಾರ್ದಿಕ್ ಐಪಿಎಲ್ ನ ಆರಂಭಿಕ ಹಂತದ ಪಂದ್ಯಗಳಿಂದ ಹೊರಗುಳಿಯುವ ಸಾಧ‍್ಯತೆಯಿದೆ. ಹಾರ್ದಿಕ್ ಅನುಪಸ್ಥಿತಿ ಮುಂಬೈ ಇಂಡಿಯನ್ಸ್ ಗೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಪಾಕಿಸ್ತಾನ ವಿಶ್ವಕಪ್ ಆಡಬೇಕು, ಟೀಂ ಇಂಡಿಯಾ ಓಡಿಹೋಗಬಾರದು ಎಂದು ಸಂಸದ ಶಶಿ ತರೂರ್