Publish Date: Thu, 20 Jun 2024 (15:57 IST)
Updated Date: Thu, 20 Jun 2024 (16:01 IST)
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಬೆಂಗಳೂರು ಮೂಲದ ಡೇವಿಡ್ ಜಾನ್ಸನ್(52) ಇಂದು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ.
ಇನ್ನೂ ಮಾಜಿ ಕ್ರಿಕೆಟ್ ಆಟಗಾರ ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕನ್ನಡಿಗ ಡೇವಿಡ್ ಜಾನ್ಸನ್(52) ಅವರು ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಸಾವನ್ನಪ್ಪಿದ್ದಾರೆ ಎಂಬ ವದಂತಿಯು ಹರಿದಾಡುತ್ತಿದ್ದು, ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಇಂದು ಮಧ್ಯಾಹ್ನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಬಿದ್ದು ಡೇವಿಡ್ ಕೊನೆಯುಸಿರೆಳೆದಿದ್ದಾರೆ.
ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಟವಾಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದ ಅವರು ಟೆಸ್ ನಲ್ಲಿ 8 ರನ್ ಮತ್ತು 3 ವಿಕೆಟ್ ಪಡೆದಿದ್ದರು. ಇವರಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.