Select Your Language

Notifications

webdunia
webdunia
webdunia
webdunia

ಜಸ್ಪ್ರೀತ್ ಬುಮ್ರಾ ಈ ವರ್ಷ ಕ್ರಿಕೆಟ್ ಆಡುವಂತೆಯೇ ಇಲ್ಲ!

ಜಸ್ಪ್ರೀತ್ ಬುಮ್ರಾ ಈ ವರ್ಷ ಕ್ರಿಕೆಟ್ ಆಡುವಂತೆಯೇ ಇಲ್ಲ!
ಮುಂಬೈ , ಶುಕ್ರವಾರ, 27 ಸೆಪ್ಟಂಬರ್ 2019 (08:54 IST)
ಮುಂಬೈ: ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯದ ಸಮಸ್ಯೆಗೊಳಗಾಗಿದ್ದಾರೆ. ಹೀಗಾಗಿ ಅವರು ಈ ವರ್ಷವಿಡೀ ಕ್ರಿಕೆಟ್ ಆಡುವಂತೆಯೇ ಇಲ್ಲ!

 

ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿರುವ ಬುಮ್ರಾ ಮುಂಬರುವ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ಬಂದ ವರದಿಯ ಪ್ರಕಾರ ಬುಮ್ರಾ ಈ ಸರಣಿಗೆ ಮಾತ್ರವಲ್ಲ, ವರ್ಷವಿಡೀ ಕ್ರಿಕೆಟ್ ನಿಂದ ದೂರವುಳಿಯಲಿದ್ದಾರೆ.

ಹೆಚ್ಚಿನ ರಿಸ್ಕ್ ತೆಗೆದುಕೊಳ್ಳದೇ ಇರಲು ನಿರ್ಧರಿಸಿರುವ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಈ ವರ್ಷವಿಡೀ ಬುಮ್ರಾಗೆ ವಿಶ್ರಾಂತಿ ನೀಡಿ ಮುಂದಿನ ವರ್ಷ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿ ಮೂಲಕ ತಂಡಕ್ಕೆ ವಾಪಸ್ ಕರೆಸಿಕೊಳ್ಳಲು ಚಿಂತನೆ ನಡೆಸಿದೆ. ತಂಡದ ಪಾಲಿಗೆ ಪ್ರಮುಖ ವೇಗಿಯಾಗಿರುವ ಬುಮ್ರಾರ ಅನುಪಸ್ಥಿತಿ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತ ನೀಡಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಷಬ್ ಪಂತ್ ರೂಪದಲ್ಲಿ ವೃದ್ಧಿಮಾನ್ ಸಹಾಗೆ ಒಲಿದ ಅದೃಷ್ಟ