Publish Date: Wed, 20 Sep 2017 (10:55 IST)
Updated Date: Wed, 20 Sep 2017 (10:58 IST)
ಕರಾಚಿ: ಒಬ್ಬರನ್ನು ಹೋಲುವ ಏಳು ವ್ಯಕ್ತಿಗಳು ಪ್ರಪಂಚದಲ್ಲಿ ಇರುತ್ತಾರೆ ಎಂಬ ನಂಬಿಕೆಯಿದೆ. ಅದೇ ರೀತಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನೇ ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದಲ್ಲಿ ಪತ್ತೆಯಾಗಿದ್ದಾನೆ.
ಇತ್ತೀಚೆಗೆ ವಿರಾಟ್ ಕೊಹ್ಲಿಯನ್ನು ಹೋಲುವ ವ್ಯಕ್ತಿಯೊಬ್ಬ ಪಾಕಿಸ್ತಾನದ ಪಿಜ್ಜಾ ಹಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾನೆಂಬ ಸುದ್ದಿ ವೈರಲ್ ಆಗಿತ್ತು. ಇದೀಗ ಬುಮ್ರಾ ಸರದಿ. ಪಾಕ್ ಮತ್ತು ವಿಶ್ವ ಇಲೆವೆನ್ ತಂಡಗಳ ನಡುವಿನ ಟಿ20 ಪಂದ್ಯದ ಸಂದರ್ಭದಲ್ಲಿ ಈತ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾನೆ. ಇದೀಗ ಈತನ ಫೋಟೋ ವೈರಲ್ ಆಗಿದೆ.
ಈತನ ಫೋಟೋ ಪ್ರಕಟಿಸಿರುವ ಪಾಕ್ ಕ್ರಿಕೆಟ್ ತಂಡದ ಅಭಿಮಾನಿಗಳ ಫೇಸ್ ಬುಕ್ ಪೇಜ್ ‘ಪಾಕಿಸ್ತಾನಕ್ಕೆ ಬಂದಿದ್ದಕ್ಕೆ ಧನ್ಯವಾದಗಳು ಜಸ್ಪ್ರೀತ್ ಬುಮ್ರಾ. ನೀವು ಯಾವತ್ತೂ ನಮಗೆ ದೊಡ್ಡ ಸ್ಪೂರ್ತಿ’ ಎಂದು ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ