Publish Date: Thu, 11 Feb 2021 (09:31 IST)
Updated Date: Thu, 11 Feb 2021 (09:32 IST)
ದುಬೈ: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಸೋತ ಬಳಿಕ ಐಸಿಸಿ ಶ್ರೇಯಾಂಕದಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಶಾಕ್ ಸಿಕ್ಕಿದೆ.
ಲೇಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಕೊಹ್ಲಿ ಐದನೇ ಸ್ಥಾನಕ್ಕೆ ಜಾರಿದರೆ, ಇಂಗ್ಲೆಂಡ್ ನಾಯಕ ಜೋ ರೂಟ್ ಎರಡು ಸ್ಥಾನ ಏರಿಕೆ ಕಂಡಿದ್ದು, ಮೂರನೇ ಸ್ಥಾನಕ್ಕೇರಿದ್ದಾರೆ. ಟಾಪ್ 10ರೊಳಗೆ ಸ್ಥಾನ ಪಡೆದ ಇನ್ನೊಬ್ಬ ಭಾರತೀಯ ಕ್ರಿಕೆಟಿಗನೆಂದರೆ ಚೇತೇಶ್ವರ ಪೂಜಾರ. ಅವರು ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.