Publish Date: Tue, 07 Nov 2017 (09:24 IST)
Updated Date: Tue, 07 Nov 2017 (09:26 IST)
ಬೆಂಗಳೂರು: ಸತತ ಮೂರು ಗೆಲುವು ಸಾಧಿಸಿ ಬೀಗುತ್ತಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ನ.9 ರಿಂದ ನಾಲ್ಕನೇ ಪಂದ್ಯವಾಡಲು ಸಜ್ಜಾಗಿದೆ.
ನಗರದ ಹೊರವಲಯದಲ್ಲಿರುವ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜ್ಯ ತಂಡ ದೆಹಲಿ ತಂಡದ ವಿರುದ್ಧ ಸೆಣಸಲಿದೆ. ಈಗಾಗಲೇ ಗೆಲುವಿನ ಹುಮ್ಮಸ್ಸಿನಲ್ಲಿರುವ ವಿನಯ್ ಕುಮಾರ್ ನೇತೃತ್ವದ ಬಳಗಕ್ಕೆ ರಾಷ್ಟ್ರೀಯ ತಂಡದ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ವಾಪಸಾತಿ ಬೂಸ್ಟ್ ಸಿಕ್ಕಿದಂತಾಗಿದೆ.
ನ್ಯೂಜಿಲೆಂಡ್ ಸರಣಿ ಮುಗಿಸಿ ಇವರಿಬ್ಬರೂ ತಂಡಕ್ಕೆ ವಾಪಸಾಗಲಿರುವುದರಿಂದ ತಂಡದ ಬಲ ಇನ್ನಷ್ಟು ಹೆಚ್ಚಿದೆ. ಇವರ ಜತೆಗೆ ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಕರ್ನಾಟಕದ ಬ್ಯಾಟಿಂಗ್ ಬಲ ಇನ್ನಷ್ಟು ಹೆಚ್ಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ